ಶಬರಿಮಲೆ : ಕೇರಳದ ವಯನಾಡ್ ಮೂಲದ ಶತಾಯುಷಿಯೊಬ್ಬರು 41 ದಿನಗಳ ಕಠಿಣ ವ್ರತ ಕೈಗೊಂಡು ಅಯ್ಯಪ್ಪ ಸ್ವಾಮಿ ಸನ್ನಿಧಿಗೆ ಭೇಟಿ ನೀಡಿ ತಮ್ಮ ಹರಕೆಯನ್ನು ತೀರಿಸಿದ್ದಾರೆ.
ಶತಾಯುಷಿ ವಯನಾಡಿನ ಮೂನ್ನನಕುಜಿಯ ಪಾರುಕುಟ್ಟಿಯಮ್ಮ 41 ದಿನಗಳ ವ್ರತವನ್ನು ಮಾಡಿ ತನ್ನ ಮಕ್ಕಳು ಹಾಗೂ ಮೊಮ್ಮಕ್ಕಳೊಂದಿಗೆ ಬೆಟ್ಟದ ದೇಗುಲ ಶಬರಿಮಲೆಗೆ ತನ್ನ ಚೊಚ್ಚಲ ಯಾತ್ರೆ ಕೈಗೊಂಡಿದ್ದಾರೆ. ನೂರು ವರ್ಷದ ಮಹಿಳೆಯೊಬ್ಬರು ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಚೊಚ್ಚಲ ಭೇಟಿ ನೀಡಿದ್ದರಿಂದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು.
ಮೊದಲ ಬಾರಿಗೆ ಶಬರಿಮಲೆ ಯಾತ್ರೆ ಕೈಗೊಂಡ ಪಾರುಕುಟ್ಟಿಯಮ್ಮ ದಾರಿಯುದ್ದಕ್ಕೂ, ಕಡಂಪುಳ, ಗುರುವಾಯೂರ್, ವೈಕೋಮ್ ಮತ್ತು ಎಟ್ಟುಮನೂರ್ ಮುಂತಾದ ದೇವಾಲಯಗಳಲ್ಲಿ ದರ್ಶನ ಪಡೆದು ಶಬರಿಮಲೆ ತಲುಪಿದ್ದಾರೆ. ಪಂಪಾ ನದಿ ಬಳಿಯಿಂದ ಪಲ್ಲಕ್ಕಿಯಲ್ಲಿ ಆಕೆಯನ್ನು ಸನ್ನಿಧಾನಕ್ಕೆ ಕರೆತರಲಾಯಿತು. ಪಾರುಕುಟ್ಟಿಯಮ್ಮ ಆಗಮಿಸಿದ ಸುದ್ದಿ ತಿಳಿದ ದೇವಸ್ವಂ ಮಂಡಳಿಯವರು ಆಕೆಗೆ ಚಿನ್ನದ ದಾರದಿಂದ ನೇಯ್ದ ಬಟ್ಟೆ ನೀಡಿ ಗೌರವಿಸಿದ್ದಾರೆ.
ಈ ಕುರಿತು ಮಾತನಾಡಿರುವ ಪಾರುಕುಟ್ಟಿಯಮ್ಮ, ದಾರಿಯುದ್ದಕ್ಕೂ ತನಗೆ ಸಹಾಯ ಮಾಡಿದ ಎಲ್ಲರಿಗೂ ಧನ್ಯವಾದಗಳು. ಜೊತೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಿದವರಿಗೆ ಒಳ್ಳೆಯದಾಗಲಿ. ತನ್ನ ಮೊಮ್ಮಗನ ಪತ್ನಿ ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿದ್ದಾಳೆ. ಆದಷ್ಟು ಬೇಗ ಇಸ್ರೇಲ್-ಹಮಾಸ್ ಕದನ ನಿಲ್ಲಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದ್ದಾರೆ.
ಮಂಗಳೂರು : ಹಿಂದೂ ಜನಜಾಗೃತಿ ಸಮಿತಿ ಹಾಗೂ ಮಟ್ಟು ಮೊಗವೀರ ಮಾಹಾಸಭಾ, ಮಟ್ಟು ಪಟ್ಣ, ಹೆಜಮಾಡಿ, ಇದರ ಅಂಗ ಸಂಸ್ಥೆಯಾದ…
ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಸಮಸ್ತ ಹಿಂದೂಗಳು ಒಟ್ಟಾಗೋಣ, ಈ ರಾಷ್ಟ್ರ ಕಾರ್ಯಕ್ಕಾಗಿ ತಮ್ಮ ಅಮೂಲ್ಯ ಯೋಗದಾನ ನೀಡೋಣ !…
ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ವತಿಯಿಂದ ಮಾನ್ಯ ಗೃಹ ಸಚಿವರಿಗೆ ಮನವಿ ಬೆಂಗಳೂರು : ದಿನಾಂಕ 26…
ದಿನಾಂಕ 31 ಡಿಸೆಂಬರ್ 2023 ರಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕಿನ ಉಜಿರೆ ಶ್ರೀ ವ್ಯಾಘ್ರ ಚಾಮುಂಡೇಶ್ವರಿ…
ಅಯೋಧ್ಯೆಯಂತೆ ಕಾಶಿ ಮಥುರಾ ಸಹಿತ ಇತರ ಎಲ್ಲ ತೀರ್ಥಕ್ಷೇತ್ರಗಳಲ್ಲೂ ಮದ್ಯ ಮಾಂಸ ನಿಷೇಧಿಸಿ ! - ಮೋಹನ ಗೌಡ, ರಾಜ್ಯ…
ಪ್ರಶಾಂತ್ ಪೂಜಾರಿ ಹಾಗೂ ದೀಪಕ್ ರಾವ್ ಅವರ ಹತ್ಯೆಯ ವಿಷಯದಲ್ಲಿ ಮಾನ್ಯ ಮುಖ್ಯ ಮಂತ್ರಿಗೆ ಒಂದು ಮನವಿಯನ್ನು ನೀಡಲಾಯಿತು. ಆ…