ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ-ಸವಾರ ಸ್ಥಳದಲ್ಲೇ ಸಾವು

0
115

ಬಂಟ್ವಾಳ: ಸ್ಕೂಟರ್‌ ಗೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ನಡೆದಿದೆ.

ಬುಧವಾರ ಸಂಜೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಪಲ್ಲಮಜಲು ಕ್ರಾಸ್ ಎಂಬಲ್ಲಿ ಸ್ಕೂಟರ್‌ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಸ್ಕೂಟರ್‌ ಸವಾರ ನಾರಾಯಣ ಎಂಬುವವರು ಸ್ಕೂಟರ್‌ ಸಮೇತ ರಸ್ತೆಗೆ ಎಸೆಯಲ್ಪಟು ಗಂಭೀರ ಗಾಯಗೊಂಡಿದ್ದರು.ಕೂಡಲೇ ಅವರನ್ನು ಚಿಕಿತ್ಸೆಗಾಗಿ ಸ್ಥಳಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿನ ವೈದ್ಯರು ಗಾಯಾಳುವನ್ನು ಪರೀಕ್ಷಿಸಿದಾಗ ವ್ಯಕ್ತಿ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 167/2023 ಕಲಂ : 279, 304(A) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here