ಹೈದರಾಬಾದ್: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಗುರುವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದರು.
ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರೇವಂತ್ ರೆಡ್ಡಿ ಸೇರಿ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.
ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಅಭೂತಪೂರ್ವ ಜಯಗಳಿಸಿತ್ತು. 119 ಸ್ಥಾನಗಳ ಪೈಕಿ 69 ಸ್ಥಾನಗಳನ್ನು ಗಳಿಸುವ ಮೂಲಕ ಸ್ಪಷ್ಟಬಹುಮತ ಪಡೆದಿತ್ತು.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.