ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ

0
101

ಹೈದರಾಬಾದ್:‌ ತೆಲಂಗಾಣ ರಾಜ್ಯ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ ಶನಿವಾರ ಆರಂಭವಾಗಿರುವ ರಾಜ್ಯ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಹಂಗಾಮಿ ಸ್ಪೀಕರ್‌ ಆಗಿ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದ್ದಾರೆ.

ಭಾರತದ ಸಂವಿಧಾನದ 180ನೇ ವಿಧಿಯ ಷರತ್ತು (1) ರ ಮೂಲಕ ನೀಡಲಾದ ಅಧಿಕಾರಗಳನ್ನು ಚಲಾಯಿಸುವ ಮೂಲಕ, ತೆಲಂಗಾಣ ರಾಜ್ಯಪಾಲರು ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಆಗಿ ನೇಮಿಸಿದ್ದಾರೆ. ಚುನಾಯಿತ ಸದಸ್ಯರಲ್ಲಿ ಒಬ್ಬರನ್ನು ಸ್ಪೀಕರ್‌ ಆಗಿ‌ ನೇಮಿಸುವವರೆಗೆ ಅಕ್ಬರುದ್ದೀನ್‌ ಸ್ಪೀಕರ್‌ ಆಗಿ ಅಧಿವೇಶನ ನಿರ್ವಹಿಸಲಿದ್ದಾರೆ.

LEAVE A REPLY

Please enter your comment!
Please enter your name here