ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ನಿಧನ

0
107

ಬಡಗನ್ನೂರು: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ(45ವ.)ರವರು ದಿಢೀರ್ ಅಸ್ವಸ್ಥಗೊಂಡು ಮಂಗಳೂರು ವೆನ್‌ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.

ಡಿ.8ರಂದು ಮೈಂದನಡ್ಕದಲ್ಲಿ ನಡೆದಿದ್ದ ವಾಲಿಬಾಲ್ ಪಂದ್ಯಾಟವೊಂದರಲ್ಲಿ ಭಾಗವಹಿಸಿ ರಾತ್ರಿ ಮನೆಗೆ ಹೋಗಿದ್ದ ಇವರು ದಿಢೀರ್ ರಕ್ತವಾಂತಿ ಮಾಡಲಾರಂಭಿಸಿದ್ದರು. ದ.9ರಂದು ಬೆಳಿಗ್ಗೆ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 7 ಗಂಟೆ ಸುಮಾರಿಗೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಮೃತರು ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಡಿ .10ರಂದು ಬೆಳಿಗ್ಗೆ 10 ಗಂಟೆಗೆ ಕುದ್ಕಾಡಿ ಮನೆಯಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here