ಸುಳ್ಯ: ಸಂಪಾಜೆ ಗ್ರಾಮದ ಕಡಪ್ಪಾಲ ಬಳಿ ಮಾಣಿ ಮೈಸೂರು ಹೆದ್ದಾರಿ ಬದಿಯಲ್ಲಿ ಸುಳ್ಯ ಕಡೆಯಿಂದ ಮಡಿಕೇರಿಗೆ ಹೋಗುತ್ತಿದ್ದ ಕಂಟೇನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.
ಘಟನೆಯಿಂದ ವಾಹನ ಜಖಂಗೊಂಡಿದ್ದು ಚಾಲಕ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.