ಹೊಸದಿಲ್ಲಿ: ಜಮ್ಮು ಕಾಶ್ಮೀರದ ಆರ್ಟಿಕಲ್ 370 ರದ್ದತಿ ವಿಚಾರವಾಗಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ. ಕೇಂದ್ರದ ನಿರ್ಣಯವನ್ನು ಸುಪ್ರೀಂ ಎತ್ತಿ ಹಿಡಿದಿದೆ.ಸುಪ್ರೀಂ ಕೋರ್ಟ್ ತೀರ್ಮಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಹರ್ಷ ವ್ಯಕ್ತಪಡಿಸಿದ್ದಾರೆ.
ಇಂದಿನ ತೀರ್ಪು ಕೇವಲ ಕಾನೂನು ತೀರ್ಪಲ್ಲ; ಇದು ಭರವಸೆಯ ದಾರಿದೀಪ, ಉಜ್ವಲ ಭವಿಷ್ಯದ ಭರವಸೆ ಮತ್ತು ಬಲಿಷ್ಠ, ಹೆಚ್ಚು ಅಖಂಡ ಭಾರತವನ್ನು ನಿರ್ಮಿಸುವ ನಮ್ಮ ಸಾಮೂಹಿಕ ಸಂಕಲ್ಪಕ್ಕೆ ಸಾಕ್ಷಿಯಾಗಿದೆ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಆರ್ಟಿಕಲ್ 370 ರದ್ದತಿಗೆ ಸಂಬಂಧಿಸಿದಂತೆ ಇಂದಿನ ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕವಾಗಿದೆ. 2019ರ ಆಗಸ್ಟ್ 5ರಂದು ಸಂಸತ್ತು ತೆಗೆದುಕೊಂಡ ನಿರ್ಧಾರವನ್ನು ಸಾಂವಿಧಾನಿಕವಾಗಿ ಎತ್ತಿಹಿಡಿದಿದೆ; ಇದು ಜಮ್ಮು, ಕಾಶ್ಮೀರ ಮತ್ತು ಲಡಾಖ್ ನಲ್ಲಿರುವ ನಮ್ಮ ಸಹೋದರಿಯರು ಮತ್ತು ಸಹೋದರರಿಗೆ ಭರವಸೆ, ಪ್ರಗತಿ ಮತ್ತು ಏಕತೆಯ ಪ್ರತಿಧ್ವನಿಸುವ ಘೋಷಣೆಯಾಗಿದೆ. ನ್ಯಾಯಾಲಯವು ತನ್ನ ಆಳವಾದ ಬುದ್ಧಿವಂತಿಕೆಯಲ್ಲಿ, ಭಾರತೀಯರಾದ ನಾವು ಎಲ್ಲಕ್ಕಿಂತ ಹೆಚ್ಚಾಗಿ ಪ್ರೀತಿಸುವ ಏಕತೆಯ ಸಾರವನ್ನು ಬಲಪಡಿಸಿದೆ ಎಂದಿದ್ದಾರೆ.