ಪುತ್ತೂರು : ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಾಕಲಾಗಿದ್ದ ‘ಬುರ್ಖಾ ತೆಗೆದು ಬನ್ನಿ ‘ ಎಂಬ ಸೂಚನಾ ಫಲಕವೊಂದು ವಿವಾದಕ್ಕೀಡಾಗಿ, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾದ ಬಳಿಕ ಸೂಚನಾ ಫಲಕವನ್ನು ತೆರವುಗೊಳಿಸಲಾಗಿದೆ.
ಕಳೆದ ಒಂದು ವರ್ಷಗಳ ಹಿಂದೆ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿರುವ ಇಸಿಜಿ ರೂಂ ನ ಬಾಗಿಲನಲ್ಲಿ ಈ ಸೂಚನಾ ಫಲಕ ಹಾಕಲಾಗಿತ್ತು.ಇದರ ಪೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ ಹರಿಯಬಿಡಲಾಗಿತ್ತು.
ಪೋಸ್ಟ್ ವೈರಲ್ ಆಗುತ್ತಿದ್ದಂತೆ ಹಾಕಲಾಗಿದ್ದ ಫಲಕ ತೆಗೆಯುವಂತೆ ಆಸ್ಪತ್ರೆಗೆ ಸಿಬ್ಬಂದಿಗಳ ಮೇಲೆ ಒತ್ತಡ ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನಲೆ ಸೂಚನಾ ಫಲಕವನ್ನು ಆಸ್ಪತ್ರೆ ಸಿಬ್ಬಂದಿಗಳು ತೆರವುಗೊಳಿಸಿದ್ದಾರೆ.
ಬುರ್ಖಾ ತೆಗೆಯದೆ ಇಸಿಜಿ ಮಾಡೋದು ಹೇಗೆಂದು ಆಸ್ಪತ್ರೆ ವೈದ್ಯರು ಮತ್ತು ನರ್ಸ್ ಗಳು ಗೊಂದಲದಲ್ಲಿದ್ದಾರೆ.