ಛತ್ತೀಸ್‌ಗಢ: ನಕ್ಸಲೀಯರು ಗುರುವಾರ ನಡೆಸಿದ ಸ್ಫೋಟದಲ್ಲಿ ಗಡಿ ಭದ್ರತಾ ಪಡೆಯ ಒಬ್ಬ ಯೋಧ ಹುತಾತ್ಮನಾಗಿದ್ದು , ಎರಡು ದಿನಗಳಲ್ಲಿ ಇದು ಎರಡನೇ ಬಲಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಎಸ್‌ಎಫ್ ಮತ್ತು ಜಿಲ್ಲಾ ಪೊಲೀಸ್ ಪಡೆಯ ಜಂಟಿ ತಂಡ ಗಸ್ತು ತಿರುಗುತ್ತಿದ್ದಾಗ ಪರತಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸದಕ್ಟೋಲಾ ಗ್ರಾಮದ ಬಳಿ ಈ ಘಟನೆ ನಡೆದಿದೆ.
ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಬಿಎಸ್‌ಎಫ್ ಹೆಡ್ ಕಾನ್‌ಸ್ಟೆಬಲ್ ಉತ್ತರ ಪ್ರದೇಶದ ಅಖಿಲೇಶ್ ರಾಯ್ (45) ಗಾಯಗೊಂಡಿದ್ದರು. ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು ಮತ್ತು ಹೆಚ್ಚಿನ ವೈದ್ಯಕೀಯ ಆರೈಕೆಗಾಗಿ ಪಖಂಜೂರ್‌ಗೆ ಕರೆದೊಯ್ಯಲಾದರೂ ಕೊನೆಯುಸಿರೆಳೆದರು ಎಂದು ಅಧಿಕಾರಿ ತಿಳಿಸಿದ್ದಾರೆ.
ಬಿಎಸ್‌ಎಫ್, ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಜಿಲ್ಲಾ ಪೊಲೀಸ್ ಪಡೆಗಳ ಜಂಟಿ ತಂಡದಿಂದ ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.