KPSC Jobs: ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ- ಡಿಗ್ರಿ ಪಾಸಾದವರಿಂದ ಅರ್ಜಿ ಆಹ್ವಾನ

By: Ommnews

Date:

Share post:

ಅರ್ಜಿ ಸಲ್ಲಿಸಲು ಅಕ್ಟೋಬರ್ 7, 2023 ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು.

Advertisement
Advertisement
Advertisement

KPSC Recruitment 2023: ಕರ್ನಾಟಕ ಲೋಕಸೇವಾ ಆಯೋಗ(Karnataka Public Service Commission) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಅಸಿಸ್ಟೆಂಟ್ ಎಂಪ್ಲಾಯ್​ಮೆಂಟ್ ಆಫೀಸರ್ (HK) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಕರ್ನಾಟಕ ಸರ್ಕಾರದ ಉದ್ಯೋಗ ಹುಡುಕುತ್ತಿದ್ರೆ ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.


ಅರ್ಜಿ ಸಲ್ಲಿಸುವ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆಕರ್ನಾಟಕ ಲೋಕ ಸೇವಾ ಆಯೋಗ
ಹುದ್ದೆಅಸಿಸ್ಟೆಂಟ್ ಎಂಪ್ಲಾಯ್​ಮೆಂಟ್ ಆಫೀಸರ್
ಒಟ್ಟು ಹುದ್ದೆ1
ವಿದ್ಯಾರ್ಹತೆಪದವಿ
ವೇತನಮಾಸಿಕ ₹ 30,350-58,250
ಉದ್ಯೋಗದ ಸ್ಥಳಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆಯ ದಿನಅಕ್ಟೋಬರ್ 7, 2023

ವಿದ್ಯಾರ್ಹತೆ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.


ವಯೋಮಿತಿ:
ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಅಕ್ಟೋಬರ್ 7, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.


ವಯೋಮಿತಿ ಸಡಿಲಿಕೆ:
SC/ST/ ಪ್ರವರ್ಗ-1 ಅಭ್ಯರ್ಥಿಗಳು- 5 ವರ್ಷ
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 3 ವರ್ಷ
PH/ ವಿಧವಾ ಅಭ್ಯರ್ಥಿಗಳು- 10 ವರ್ಷ


ಅರ್ಜಿ ಶುಲ್ಕ:
SC/ST/ ಪ್ರವರ್ಗ-1 & PH ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ.
ಮಾಜಿ ಸೈನಿಕ ಅಭ್ಯರ್ಥಿಗಳು- 50 ರೂ.
ಪ್ರವರ್ಗ 2ಎ/2ಬಿ/3ಎ & 3ಬಿ ಅಭ್ಯರ್ಥಿಗಳು- 300 ರೂ.
ಸಾಮಾನ್ಯ ಅಭ್ಯರ್ಥಿಗಳು- 600 ರೂ.
ಪಾವತಿಸುವ ಬಗೆ- ಆನ್​ಲೈನ್

ವೇತನ:
ಮಾಸಿಕ ₹ 30,350-58,250


ಉದ್ಯೋಗದ ಸ್ಥಳ:
ಕರ್ನಾಟಕ


ಆಯ್ಕೆ ಪ್ರಕ್ರಿಯೆ:
ಕನ್ನಡ ಭಾಷಾ ಪರೀಕ್ಷೆ
ಸ್ಪರ್ಧಾತ್ಮಕ ಪರೀಕ್ಷೆ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/09/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 7, 2023
ಕನ್ನಡ ಭಾಷಾ ಪರೀಕ್ಷೆ ನಡೆಯುವ ದಿನಾಂಕ: ಡಿಸೆಂಬರ್ 2, 2023
ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನ: ಡಿಸೆಂಬರ್ 3, 2023


ಹೆಚ್ಚಿನ ವಿವರಗಳಿಗಾಗಿ ಕೆಳಗಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ.


ಕೇಂದ್ರ ಕಚೇರಿ ಮಾಹಿತಿ ಕೇಂದ್ರ ಮತ್ತು ಸಹಾಯವಾಣಿ ಸಂಖ್ಯೆ: 080-30574957/30574901
ಪ್ರಾಂತೀಯ ಕಛೇರಿ ಮೈಸೂರು: 0821-2545956
ಪ್ರಾಂತೀಯ ಕಛೇರಿ ಬೆಳಗಾವಿ: 0831-2475345
ಪ್ರಾಂತೀಯ ಕಛೇರಿ ಕಲಬುರಗಿ: 08472-227944
ಪ್ರಾಂತೀಯ ಕಛೇರಿ ಶಿವಮೊಗ್ಗ: 08182-228099

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section