ವಿಲಾಸ್ ನಾಯಕ್ ಕುಂಚದಲ್ಲಿ ರಮೇಶ್ ಅರವಿಂದ್ ದೈಜಿ

By: Ommnews

Date:

Share post:

ಶಿವಾಜಿ ಸುರತ್ಕಲ್ ಭಾಗ 1 ಮತ್ತು 2 ರ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರಕ್ಕೆ ನಟ ರಮೇಶ್ ಅರವಿಂದ್ ಮತ್ತು ನಿರ್ದೇಶಕ ಆಕಾಶ್ ಶ್ರೀವತ್ಸ ಕೈಜೋಡಿಸಿದ್ದಾರೆ. ನಿನ್ನೆಯಷ್ಟೇ ರಮೇಶ್ ಅರವಿಂದ್ ಅವರ ಹುಟ್ಟು ಹಬ್ಬಕ್ಕೆ ಹೊಸ ಸಿನಿಮಾ ಘೋಷಣೆ ಮಾಡಿದ್ದು, ಈ ಚಿತ್ರದ ‘ದೈಜಿ’ ಎಂದು ಹೆಸರಿಡಲಾಗಿದೆ. ಈ ಸಿನಿಮಾದ ಪೋಸ್ಟರ್ ಅನ್ನು ಖ್ಯಾತ ಕಲಾವಿದ ವಿಲಾಸ್ ನಾಯಕ್ ತಮ್ಮದೇ ಆ ಕುಂಚದಲ್ಲಿ ಸೆರೆ ಹಿಡಿದಿದ್ದಾರೆ. ಆ ಪೇಟಿಂಗ್ ಅನ್ನು ಚಿತ್ರತಂಡಕ್ಕೆ ಅವರು ಅರ್ಪಿಸಿದ್ದಾರೆ.

Advertisement
Advertisement
Advertisement

ನಿನ್ನೆಯಷ್ಟೇ ಫಸ್ಟ್ ಲುಕ್ ರಿಲೀಸ್ ಆಗಿರುವ ದೈಜಿ ಚಿತ್ರವನ್ನು ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ನಿರ್ಮಿಸುತ್ತಿದ್ದಾರೆ. ಇದಕ್ಕೂ ಮುಂಚೆ ಕಾನ್ಸ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ತೆರೆ ಕಂಡ ಕಿರು ಚಿತ್ರ ಸುಳ್ಳೇ ಸತ್ಯ, ಪವನ್ ಕುಮಾರ್ ರವರ ಲೂಸಿಯಾ, ಡಾಲಿ ಧನಂಜಯ್ ಅವರು ನಟಿಸಿದ ‘ಬದ್ಮಾಶ್’ ಇದೇ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿದ್ದವು.

ಅಂದಹಾಗೆ ಚಿತ್ರದ ಶೀರ್ಶಿಕೆ ‘ದೈಜಿ’ ಗೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಅರ್ಥಗಳಿವೆ. ಕೊಂಕಣಿಯಲಿ ದೈಜಿ ಎಂದರೆ ರಕ್ತ ಸಂಬಂಧ. ಜಪಾನೀ ಭಾಷೆಯಲ್ಲಿ ದೈಜಿ ಎಂದರೆ ಬಹಳ ಕಾಳಜಿ ವಹಿಸಬೇಕಾದ ವಿಚಾರ ಎಂದು. ಹೀಗೆ ಹಲವು ಅರ್ಥಗಳು. ಚಿತ್ರಕ್ಕೆ ಒಂದು ಸಾರ್ವತ್ರಿಕವಾದ ನೆಲೆ ಕಂಡುಕೊಳ್ಳುವ ಸಾಮರ್ಥ್ಯವಿದೆ ಎಂಬುದು ಚಿತ್ರ ತಂಡದ ಬಲವಾದ ನಂಬಿಕೆ. ಚಿತ್ರವು ಮಿಸ್ಟರಿ ಅಥವಾ ಹಾರರ್ ಜ಼ಾನರ್ ಗೆ ಬರುತ್ತದೆ. ಚಿತ್ರಕಥೆಯನ್ನು ಶಿವಾಜಿ ಸುರತ್ಕಲ್ ಬರೆದ ಅಭಿಜಿತ್ ವೈ ಆರ್ ಮತ್ತು ಆಕಾಶ್ ಶ್ರೀವತ್ಸ ರವರು ನಿರ್ಮಾಪಕ ರವಿ ಕಶ್ಯಪ್ ವಿವರಿಸಿದ ನೈಜ ಘಟನೆಗಳನ್ನು ಆಧರಿಸಿ ಬರೆದಿದ್ದಾರೆ.

ಚಿತ್ರದ ನಾಯಕಿಗಾಗು ಆಗಲೇ ಹುಡುಕಾಟ ಪ್ರಾರಂಭವಾಗಿದೆ. ಚಿತ್ರೀಕರಣ ಡಿಸೆಂಬರ್ ಅಥವಾ ಜನವರಿ ತಿಂಗಳಿನಲ್ಲಿ ಪ್ರಾರಂಭವಾಗಲಿದೆ. ಚಿತ್ರವು ಸಂಪೂರ್ಣವಾಗಿ ಅಮೆರಿಕದಲ್ಲಿ ಚಿತ್ರೀಕರಣವಾಗಲಿದೆ. ಇತ್ತೀಚೆಗಷ್ಟೇ ೨೫ ವರ್ಷಗಳ ಸಂಭ್ರಮ ಆಚರಿಸಿದ ಅಮೆರಿಕ ಅಮೆರಿಕ ಚಿತ್ರದಂತೆಯೇ ಇದೂ ಕೂಡ ಬಹುತೇಕ ಅಮೆರಿಕದಲ್ಲಿಯೇ ನಡೆಯುವ ಕಥೆ.

ಇದು ಬಹುಮುಖ ಪ್ರತಿಭೆಯ ಹಾಗೂ ದಕ್ಷಿಣ ಭಾರತದ ಎಲ್ಲಾ ಭಾಷೆಗಳಲ್ಲೂ ನಟಿಸಿ ಸೈ ಎನಿಸಿಕೊಂಡ ನಟ ಶ್ರೀ ರಮೇಶ್ ಅರವಿಂದ ರವರ ೧೦೬ ನೇ ಚಿತ್ರ. ತನ್ನ ಸಿನಿ ಜೀವನದಲ್ಲಿ ವಿಭಿನ್ನ ಪಾತ್ರಗಳಲ್ಲಿಲ್ ಮಿಂಚಿದ ರಮೇಶ್ ರವರ ಸ್ಮರಣೀಯ ಚಿತ್ರಗಳೆಂದರೆ ಅಮೃತವರ್ಶಿಣಿ, ಅಮೆರಿಕ ಅಮೆರಿಕ, ರಾಮ ಶಾಮ ಭಾಮ, ಶಿವಾಜಿ ಸುರತ್ಕಲ್… ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ತಮಿಳಿನಲ್ಲಿ ಡ್ಯೂಯೆಟ್, ಸತಿ ಲೀಲಾವತಿ, ಪಂಚತಂತಿರಂ, ಉತ್ತಮ ವಿಲ್ಲಿನ್, ತೆಲುಗು ಚಿತ್ರರಂಗದಲ್ಲಿ ಲಿಟಲ್ ಸೋಲ್ಜರ್ಸ್, ಮಲಯಾಳಂ ನಲ್ಲಿ ಅವನ್ ಅನಂತಪದ್ಮನಾಭನ್.. ಹೀಗೆ ಬಹು ಭಾಷಾ ತಾರೆಯಾದ ರಮೇಶ್ ಅರವಿಂದ್ ರವರು ದೈಜಿ ಚಿತ್ರದಲ್ಲಿ ತೀರಾ ವಿಭಿನ್ನ ಪಾತ್ರದಲ್ಲಿ, ಗೆಟಪ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರತಂಡವು ಚಿತ್ರೀಕರಣವನ್ನು ಬಹಳ ಹುಮ್ಮಸ್ಸಿನಿಂದ ಎದುರುನೋಡುತ್ತಿದೆ.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section