
ನಮ್ಮ ಸರ್ಕಾರದ ವಿದ್ಯಾರ್ಥಿ ಸ್ನೇಹಿ ನಿಲುವಿನಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.ಆಗಸ್ಟ್–ಸೆಪ್ಟೆಂಬರ್‍ನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ -2ರಲ್ಲಿ 41,961 ವಿದ್ಯಾರ್ಥಿಗಳು ಉತ್ತೀರ್ಣ ಶಿಕ್ಷಣ ಮುಂದುವರೆಸುವ ಅರ್ಹತೆ ಪಡೆದುಕೊಂಡಿದ್ದಾರೆ ಎಂದು ಸಂತಸ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ.
ಬುಧವಾರ ಟ್ವೀಟ್ ಮೂಲಕ ಪರೀಕ್ಷೆ ವ್ಯವಸ್ಥೆಯಲ್ಲಿ ಮಾಡಿರುವ ಬದಲಾವಣೆಯನ್ನು ಸಿ.ಎಂ ಸಿದ್ದರಾಮಯ್ಯ ವ್ಯಕ್ತಪಡಿಸಿದ್ದಾರೆ.
‘ನಾಡಿನ ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಿಮುಖನಾಗದೆ ಗರಿಷ್ಠ ಹಂತದವರೆಗೆ ಶಿಕ್ಷಣ ಪಡೆದು, ದೇಶದ ಆಸ್ತಿಯಾಗಬೇಕೆಂಬ ನಮ್ಮ ಉದ್ದೇಶಕ್ಕೆ ದೊರೆತಿರುವ ಈ ಆರಂಭಿಕ ಯಶಸ್ಸು ಮುಂದಿನ ದಿನಗಳಲ್ಲಿ ಮತ್ತಷ್ಟು ಶೈಕ್ಷಣಿಕ ಸುಧಾರಣೆಗಳಿಗೆ ನಾಂದಿಯಾಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.