ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ

0
104

ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದೆ.ಒಳನಾಡಿನ ಒಂದೆರಡು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಇರುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

LEAVE A REPLY

Please enter your comment!
Please enter your name here