ಬಂಟ್ವಾಳ ನಗರ ಠಾಣೆ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾದ ಅನಂತಪದ್ಮನಾಭ

0
112

ಬಂಟ್ವಾಳ : ಬಂಟ್ವಾಳ ನಗರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಅನಂತಪದ್ಮನಾಭ ಅವರು ಕರ್ತವ್ಯಕ್ಕೆ ಹಾಜರಾಗಿದ್ದು ಪ್ರಭಾರ ಇನ್ಸ್ ಪೆಕ್ಟರ್ ನಾಗರಾಜ್ ಎಚ್.ಇ.ಅವರು ಪುಷ್ಪಗುಚ್ಚ ನೀಡಿ ಸ್ವಾಗತಿಸಿದರು.

ವಿವೇಕಾನಂದ ಅವರು ವರ್ಗಾವಣೆ ಆದ ಬಳಿಕ ಖಾಲಿಯಾಗಿದ್ದ ನಗರ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಆಗಿ ಕದ್ರಿ ಪೋಲಿಸ್ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿ ಕರ್ತವ್ಯದಲ್ಲಿದ್ದು, ಲೋಕಾಯುಕ್ತ ಇಲಾಖೆಗೆ ವರ್ಗಾವಣೆಗೊಂಡಿದ್ದ ಅನಂತಪದ್ಮನಾಭ ಅವರನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯಕ್ಕೆ ಹಾಜರಾಗುವಂತೆ ‌ಸರಕಾರ ಅದೇಶ ಮಾಡಿತ್ತು.

ಕಳೆದ ವಾರ ಇವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತಾದರೂ ಅನಾರೋಗ್ಯದ ಕಾರಣ ಇವರು ಇಂದು ಠಾಣೆಯಲ್ಲಿ ಚಾರ್ಜ್ ತೆಗೆದುಕೊಂಡರು.

ಇವರು ಕದ್ರಿ ಪೋಲಿಸ್ ಠಾಣೆಯಲ್ಲಿ ಉತ್ತಮ ಅಧಿಕಾರಿ ಎಂಬ ಹೆಸರು ಗಳಿಸಿದ್ದಾರೆ.

LEAVE A REPLY

Please enter your comment!
Please enter your name here