ಪುತ್ತೂರು: ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ನಿಧನ

0
120

ಪುತ್ತೂರು, ಸೆ 24 : ಕಾರು ಢಿಕ್ಕಿಯಾಗಿ ಐದು ವರ್ಷ ಪ್ರಾಯದ ಬಾಲಕ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೆಯ್ಯೂರಿನಲ್ಲಿ ನಡೆದಿದೆ.

ಕೆಯ್ಯೂರು ಗ್ರಾಮದ ನಿವಾಸಿ ಹಾರಿಸ್ ದಾರಿಮಿ ಎಂಬವರ ಪುತ್ರ, ಮಹಮ್ಮದ್ ಆದಿಲ್ (5) ಮೃತಪಟ್ಟ ಬಾಲಕ.

ಬಾಲಕ ಯುಕೆಜಿ ವಿದ್ಯಾರ್ಥಿಯಾಗಿದ್ದು, ಶನಿವಾರ ಮಧ್ಯಾಹ್ನ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರು ಬಾಲಕನಿಗೆ ಢಿಕ್ಕಿಯಾಗಿದೆ.

ಇನ್ನು ಢಿಕ್ಕಿಯ ರಭಸಕ್ಕೆ ಬಾಲಕ ಗಂಭೀರ ಗಾಯಗೊಂಡಿದ್ದು, ತಕ್ಷಣ ಬಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಸೇರಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here