ಮಂಡ್ಯ: ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
ಸೋಮವಾರ ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ 4,105 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನಿನ್ನೆ (ಭಾನುವಾರ) 3,838 ಕ್ಯೂಸೆಕ್ ಹಾಗೂ ಮೊನ್ನೆ (ಶನಿವಾರ) 2,973 ಕ್ಯೂಸೆಕ್ ನೀರು ಹರಿಸಲಾಗಿತ್ತು. ಇಂದು ಏಕಾಏಕಿ 4,105 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನಾಲೆ ಹಾಗೂ ತಮಿಳುನಾಡಿಗೆ ಸೇರಿ ಕೆಆರ್ಎಸ್ ಡ್ಯಾಂನಿಂದ 6,716 ಕ್ಯೂಸೆಕ್ ಹೊರ ಹರಿವು ಇದೆ.
ಅತ್ತ ಕಬಿನಿ ಜಲಾಶಯದಿಂದಲೂ ತಮಿಳುನಾಡಿಗೆ ನೀರನ್ನು ಹರಿಸಲಾಗುತ್ತಿದೆ. ಕಬಿನಿಯಿಂದ 2,500 ಕ್ಯೂಸೆಕ್ ನೀರು ತಮಿಳುನಾಡಿಗೆ ಹೋದರೆ, ಕೆಆರ್ಎಸ್ ಹಾಗೂ ಹಾಗೂ ಕಬಿನಿಯಿಂದ ನದಿ ಮೂಲಕ ತಮಿಳುನಾಡಿಗೆ 6,605 ನೀರು ಬಿಡುಗಡೆಯಾಗುತ್ತಿದೆ.