ಕರ್ನಾಟಕ ಬಂದ್ ಹಿನ್ನೆಲೆ ಶಾಲಾ, ಕಾಲೇಜುಗಳಿಗೆ ರಜೆ ನೀಡೋ ಅಧಿಕಾರ ಡಿಸಿಗಳಿಗೆ ಬಿಟ್ಟ ಶಿಕ್ಷಣ ಇಲಾಖೆ

0
104

ಬೆಂಗಳೂರು: ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆ ಜಿಲ್ಲಾಧಿಕಾರಿಗೆ ನೀಡಿದೆ.

ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ.

ಖಾಸಗಿ ಶಾಲೆಗಳ ಒಕ್ಕೂಟ ಕರ್ನಾಟಕ ಬಂದ್‌ಗೆ ನೈತಿಕ ಬೆಂಬಲ ವ್ಯಕ್ತಪಡಿಸಿದೆ. ಶಾಲೆಗಳಿಗೆ ರಜೆ ನೀಡುವ ನಿರ್ಧಾರವನ್ನು ಆಯಾ ಶಾಲಾ ಆಡಳಿತ ಮಂಡಳಿಗೆ ಒಕ್ಕೂಟ ನೀಡಿದೆ.

ಪರಿಸ್ಥಿತಿಗೆ ಅನುಗುಣವಾಗಿ ಶಾಲೆಗಳು ರಜೆ ನೀಡಬಹುದು. ಜಿಲ್ಲಾಧಿಕಾರಿಗಳು ರಜೆ ನೀಡುವ ನಿರ್ಧಾರ ತೆಗೆದುಕೊಳ್ಳುವಂತೆ ಖಾಸಗಿ ಶಾಲೆ ಸಂಘಟನೆಗಳು ಮನವಿ ಮಾಡಿವೆ.

LEAVE A REPLY

Please enter your comment!
Please enter your name here