ಶ್ರೀನಗರ, ಅ.4: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಧಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ 48 ಗಂಟೆಗಳಲ್ಲಿ ಇದು ಎರಡನೇ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಾಗಿದೆ.
ರಾಜೌರಿ ಜಿಲ್ಲೆಯ ಕಲಾಕೋಟೆ ಅರಣ್ಯದಲ್ಲಿ ಕಳೆದ 48 ಗಂಟೆಗಳಿಂದ ಮತ್ತೊಂದು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ನಡೆಯುತ್ತಿದೆ. ಆರಂಭಿಕ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಕಲಾಕೋಟೆ ಅರಣ್ಯದಲ್ಲಿ ನೆಲೆಯೂರಿರುವ ಭಯೋತ್ಪಾದಕರ ಪತ್ತೆಗೆ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.
ಪೊಲೀಸರ ಪ್ರಕಾರ, ಹತ್ಯೆಯಾದ ಭಯೋತ್ಪಾದಕರನ್ನು ಕುಲ್ಗಾಮ್ ಜಿಲ್ಲೆಯ ನಿವಾಸಿಗಳಾದ ಬಸಿತ್ ಅಮೀನ್ ಭಟ್ ಮತ್ತು ಸಾಕಿಬ್ ಅಹ್ಮದ್ ಲೋನ್ ಎಂದು ಗುರುತಿಸಲಾಗಿದೆ. ಕುಲ್ಗಾಮ್‌ನ ಫ್ರಿಸಲ್ ಮತ್ತು ಹವೂರಾ ಪ್ರದೇಶದ ನಿವಾಸಿಗಳಾದ ಭಟ್ ಮತ್ತು ಲೋನ್ ಇಬ್ಬರೂ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಹತರಾದ ಭಯೋತ್ಪಾದಕರನ್ನು ಫ್ರಿಸಲ್‌ನ ಬಸಿತ್ ಅಮೀನ್ ಭಟ್ ಮತ್ತು ಕುಲ್ಗಾಮ್‌ನ ಹವೂರಾದ ಸಾಕಿಬ್ ಅಹ್ಮದ್ ಲೋನ್ ಎಂದು ಗುರುತಿಸಲಾಗಿದೆ, ಅವರು ನಿಷೇಧಿತ ಭಯೋತ್ಪಾದಕ ಸಂಘಟನೆ ಎಚ್‌ಎಂ (ಹಿಜ್ಬುಲ್ ಮುಜಾಹಿದ್ದೀನ್) ನೊಂದಿಗೆ ಸಂಪರ್ಕ ಹೊಂದಿದ್ದಾರೆ” ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹತ್ಯೆಗೀಡಾದ ಭಯೋತ್ಪಾದಕರಿಂದ ಎರಡು AK-47 ಅಸಾಲ್ಟ್ ರೈಫಲ್‌ಗಳು, ಇತರ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಮತ್ತು ಇತರ ದೋಷಾರೋಪಣೆ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.