ಅಮೆರಿಕದ ನ್ಯೂಜೆರ್ಸಿಯಲ್ಲಿ ಭಾರತ ಮೂಲದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

0
102

ವಾಷಿಂಗ್ಟನ್: ಭಾರತ ಮೂಲದ ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾಗಿರುವ ಘಟನೆ ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದಿದೆ.

ತೇಜ್ ಪ್ರತಾಪ್ ಸಿಂಗ್ (43), ಸೋನಾಲ್ ಪರಿಹಾರ್ (42) ಮತ್ತು ಈ ದಂಪತಿಯ 10 ಹಾಗೂ 6 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಅನುಮಾನಾಸ್ಪದವಾಗಿ ನಾಲ್ವರ ಶವ ಪತ್ತೆಯಾಗಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ.

ಕುಟುಂಬ ವಾಸಿಸುತ್ತಿದ್ದ ನೆರೆಹೊರೆಯವರು ಅಕ್ಟೋಬರ್ 4 ರಂದು ಸಂಜೆ ಪೊಲೀಸರಿಗೆ ಕರೆ ಮಾಡಿ, ಅವರ ಯೋಗಕ್ಷೇಮದ ಬಗ್ಗೆ ಅನುಮಾನ ಮೂಡುತ್ತಿರುವುದಾಗಿ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಅವರ ಮನೆಗೆ ತೆರಳಿ ಪರಿಶೀಲಿಸಿದಾಗ ನಾಲ್ವರು ಕೂಡಾ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

ದಂಪತಿಯಿಬ್ಬರು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದು, ಅವರಲ್ಲಿ ಒಬ್ಬರು ಸಂಪನ್ಮೂಲ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ಕೊಲೆಯೋ ಆತ್ಮಹತ್ಯೆಯೋ ಎಂಬುದನ್ನು ತಿಳಿದುಕೊಳ್ಳಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here