ನ.7ರಿಂದ ಡಿ.3ರವರೆಗೆ ಪಂಚರಾಜ್ಯ ಚುನಾವಣೆ

0
111

ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಪೂರ್ವಭಾಯಿಯಾಗಿ ದೇಶದ ಕುತೂಹಲ ಕೆರಳಿಸಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಸೋಮವಾರ ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.

ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.

ಮಿಜೋರಾಂ ವಿಧಾನಸಭೆ ಚುನಾವಣೆಯು ನವೆಂಬರ್ 7ರಂದು ನಡೆಯಲಿದೆ. ಛತ್ತೀಸ್ ಗಡದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನ.7 ಮತ್ತು 17ರಂದು ಮತದಾನ ನಡೆಯಲಿದೆ. ಮಧ್ಯ ಪ್ರದೇಶದಲ್ಲಿ ನ.17, ರಾಜಸ್ಥಾನದಲ್ಲಿ ನ.23ರಂದು ಮತ್ತು ತೆಲಂಗಾಣದಲ್ಲಿ ನ. 30ರಂದು ಮತದಾನ ನಡೆಯಲಿದೆ.

ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆಯು ಡಿಸೆಂಬರ್ 3ರಂದು ನಡೆಯಲಿದೆ.

LEAVE A REPLY

Please enter your comment!
Please enter your name here