ವಿಶ್ವ ಮಟ್ಟದಲ್ಲಿ ಜವಾನ್ ಸಿನಿಮಾ ಸದ್ದು ಮಾಡಿದೆ. ಸಾವಿರಾರು ಕೋಟಿ ರೂಪಾಯಿ ಸಂಪಾದನೆ ಮಾಡಿದೆ. ಇನ್ನೂ ಹಲವಾರು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರಸಾರ ಕಾಣುತ್ತಿದೆ. ಈ ಸಂದರ್ಭದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಗೆ ಜೀವ ಬೆದರಿಕೆ ಇದೆ ಎಂದು ಹೇಳಲಾಗುತ್ತಿದೆ. ಹಾಗಾಗಿಯೇ ಮಹಾರಾಷ್ಟ್ರ ಸರ್ಕಾರ ಅವರಿಗೆ ವೈಪ್ಲಸ್ ಸೆಕ್ಯೂರಿಟಿ ನೀಡಿದೆ.
ಜವಾನ್ ಸಿನಿಮಾದ ಈವರೆಗಿನ ಕಲೆಕ್ಷನ್ 1103.27 ಕೋಟಿ ರೂಪಾಯಿ ಎಂದು ಸ್ವತಃ ನಿರ್ಮಾಣ ಸಂಸ್ಥೆಯೇ ಘೋಷಣೆ ಮಾಡಿದೆ. ಶಾರುಖ್ ಖಾನ್ ಅವರ ರೆಡ್ ಚಿಲ್ಲಿ ಎಂಟರ್ ಟೇನ್ಮೆಂಟ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ವೊಂದನ್ನು ಹಂಚಿಕೊಳ್ಳುವ ಮೂಲಕ ಅಧಿಕೃತ ಮಾಹಿತಿಯನ್ನು ಹೊರ ಹಾಕಿದೆ. ಇದು ವಿಶ್ವದಾದ್ಯಂತ ಬಂದ ಒಟ್ಟು ಕಲೆಕ್ಷನ್ ಆಗಿದೆ.
ವಿಶ್ವದಾದ್ಯಂತ ‘ಜವಾನ್’ ಸಿನಿಮಾ ದಾಖಲೆ ರೀತಿಯಲ್ಲಿ ಕಲೆಕ್ಷನ್ ಮಾಡಿದರೆ, ಭಾರತದಲ್ಲೇ ಅದು ಗಳಿಸಿದ ಒಟ್ಟು ಮೊತ್ತ ಅಂದಾಜು 600 ಕೋಟಿ ರೂಪಾಯಿಗೂ ಹೆಚ್ಚು ಆಗಿದೆ. ಈ ಪ್ರಮಾಣದಲ್ಲಿ ಹಣ ಗಳಿಕೆ ಮಾಡಿದ ಮೊದಲ ಹಿಂದಿ ಸಿನಿಮಾ ಎನ್ನುವ ದಾಖಲೆ ಕೂಡ ಬರೆದಿದೆ. ಇದೆಲ್ಲವೂ ಅಧಿಕೃತ ಘೋಷಣೆ ಎನ್ನುವುದು ವಿಶೇಷ.