ದಕ್ಷಿಣ ಇಸ್ರೇಲ್‌ನ ನೆವಾಟಿಮ್ ವಾಯುನೆಲೆಗೆ ಬಂದಿಳಿದ ಅಮೇರಿಕದ ಮೊದಲ ವಿಮಾನ

0
106

ಜೆರುಸಲೆಂ: ಭಾರೀ ಶಸ್ತ್ರಾಸ್ತ್ರಗಳನ್ನು ಹೊತ್ತ ಯುಎಸ್‌ ಮೊದಲ ವಿಮಾನವು ದಕ್ಷಿಣ ಇಸ್ರೇಲ್‌ನ ನೆವಾಟಿಮ್ ವಾಯುನೆಲೆಗೆ ಬಂದಿಳಿದಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿಕೊಂಡಿದೆ.

ಈ ಕುರಿತು ಮಾತನಾಡಿರುವ ಯುಎಸ್‌ ಅಧ್ಯಕ್ಷ ಜೋ ಬೈಡನ್‌, ಇಸ್ರೇಲ್ ಅನ್ನು ನಿರ್ನಾಮ ಮಾಡುವುದು ಹಾಗೂ ಯಹೂದಿ ಜನರನ್ನು ಕೊಲ್ಲುವುದೇ ಹಮಾಸ್‌ನ ಉದ್ದೇಶವಾಗಿದೆ. ಇಸ್ರೇಲ್ ಹಾಗೂ ಹಮಾಸ್ ಸಂಘರ್ಷದಲ್ಲಿ ಇಲ್ಲಿಯವರೆಗೆ 14 ಜನ ಅಮೆರಿಕನ್ನರು ಸಾವನ್ನಪ್ಪಿದ್ದಾರೆ. ಇಸ್ರೇಲ್‌ನಲ್ಲಿ ಸುಮಾರು 1,000 ನಾಗರಿಕರ ಹತ್ಯೆಯಾಗಿದೆ.

ಹಮಾಸ್ ಶನಿವಾರ ಇಸ್ರೇಲ್ ಮೇಲೆ ದಾಳಿ ಪ್ರಾರಂಭಿಸಿದ್ದು, ನೂರಾರು ಜನರನ್ನು ಕೊಂದಿದೆ. ಇದು ದಶಕದಲ್ಲಿಯೇ ಅತಿ ದೊಡ್ಡ ಹಿನ್ನಡೆಯಾಗಿದೆ. ಇಸ್ರೇಲ್ ಈ ದಾಳಿಗೆ ಪ್ರತಿಯಾಗಿ ಈಗಾಗಲೇ ಗಾಜಾದ ಮೇಲೆ ವೈಮಾನಿಕ ದಾಳಿ ನಡೆಸಿದೆ ಹಾಗೂ 800ಕ್ಕೂ ಅಧಿಕ ಜನರನ್ನು ಕೊಂದಿದೆ. ಈ ಪ್ರದೇಶದಲ್ಲಿ ಅಮೆರಿಕ ತನ್ನ ಮಿಲಿಟರಿ ಬಲವನ್ನು ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ನಮ್ಮ ಆಡಳಿತವು ಇಸ್ರೇಲ್‌ಗೆ ಯುದ್ಧ ಸಾಮಗ್ರಿಗಳನ್ನ ಪೂರೈಕೆ ಮಾಡಿದೆ. ಇದು ಯುದ್ಧದ ಸಮಯದಲ್ಲಿ ಪ್ರಾದೇಶಿಕ ಭದ್ರತೆ ಮತ್ತು ಸ್ಥಿರತೆಯನ್ನು ಕಾಯ್ದುಕೊಳ್ಳುವ ಪ್ರಮುಖ ಭಾಗವೂ ಆಗಿದೆ. ಇಸ್ರೇಲ್‌ ತನ್ನನ್ನು ತಾನು ರಕ್ಷಣೆ ಮಾಡಿಕೊಳ್ಳಲು ಅಮೆರಿಕ ಬೆಂಬಲಿಸುತ್ತಿದೆ ಎಂಬುದಾಗಿ ಹೇಳಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here