BMRCL ನೇಮಕಾತಿ 2023: ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ.
ಅಭ್ಯರ್ಥಿಗಳು ಆನ್ಲೈನ್ (Online) & ಆಫ್ಲೈನ್ (Offline) ಮೂಲಕ ಅರ್ಜಿ ಸಲ್ಲಿಸಬಹುದು.
ಅಕ್ಟೋಬರ್ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮೆಟ್ರೋದ ಅಧಿಕೃತ ವೆಬ್ಸೈಟ್ bmrc.co.in ಗೆ ಭೇಟಿ ನೀಡಬಹುದು.
ಹುದ್ದೆಯ ಮಾಹಿತಿ:
ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- 1 ಅಡಿಶನಲ್ ಚೀಫ್ ಎಂಜಿನಿಯರ್ (ಟ್ರಾಕ್ಷನ್ & RSS)-2 ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್ )- 1 ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ)- 1 ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS)- 1 ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್)- 1 ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್)- 1
ವಿದ್ಯಾರ್ಹತೆ:
ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಪದವಿ ಅಡಿಶನಲ್ ಚೀಫ್ ಎಂಜಿನಿಯರ್ (ಟ್ರಾಕ್ಷನ್ & RSS)- ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ನಲ್ಲಿ ಪದವಿ ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್ )- ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ ಮೆಕ್ಯಾನಿಕಲ್/ ಸಿವಿಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ)- ಎಂಜಿನಿಯರಿಂಗ್ನಲ್ಲಿ ಪದವಿ, ಎಂ.ಎಸ್ಸಿ ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS)- ಎಲೆಕ್ಟ್ರಿಕಲ್/ ಮೆಕ್ಯಾನಿಕಲ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್)- ಡಿಪ್ಲೊಮಾ, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್/ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್ ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್)- ಡಿಪ್ಲೊಮಾ, ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್/ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಎಂಜಿನಿಯರಿಂಗ್ನಲ್ಲಿ ಬಿಇ/ಬಿ.ಟೆಕ್
ವಯೋಮಿತಿ:
ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- 58 ವರ್ಷ ಅಡಿಶನಲ್ ಚೀಫ್ ಎಂಜಿನಿಯರ್ (ಟ್ರಾಕ್ಷನ್ & RSS)- 55 ವರ್ಷ ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಸ್ಟಂ ಕಾಂಟ್ರಾಕ್ಸ್ಟ್ )- 50 ವರ್ಷ ಡೆಪ್ಯುಟಿ ಚೀಫ್ ಎಂಜಿನಿಯರ್ (ಆಪರೇಶನ್ ಸೇಫ್ಟಿ)- 50 ವರ್ಷ ಡೆಪ್ಯುಟಿ ಚೀಫ್ ಎಂಜಿನಿಯರ್ (ECS/TVS)- 50 ವರ್ಷ ಡೆಪ್ಯುಟಿ ಚೀಫ್ ಎಂಜಿನಿಯರ್ (ಸಿಗ್ನಲಿಂಗ್)- 50 ವರ್ಷ ಎಕ್ಸಿಕ್ಯೂಟಿವ್ ಎಂಜಿನಿಯರ್ (ಸಿಗ್ನಲಿಂಗ್)- 45 ವರ್ಷ
ಉದ್ಯೋಗದ ಸ್ಥಳ: ಬೆಂಗಳೂರು
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಪೋಸ್ಟ್/ ಆನ್ಲೈನ್ ಮೂಲಕವೂ ಅರ್ಜಿ ಹಾಕಬಹುದು.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಜನರಲ್ ಮ್ಯಾನೇಜರ್ (HR) ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ 3ನೇ ಮಹಡಿ, BMTC ಕಾಂಪ್ಲೆಕ್ಸ್, K.H. ರಸ್ತೆ, ಶಾಂತಿನಗರ, ಬೆಂಗಳೂರು – 560027
ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ: 26/09/2023 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 25, 2023