ಸುಳ್ಯ: ಉದ್ಯೋಗದ ಅಮಿಷವೊಡ್ಡಿ ಯುವತಿಯೋರ್ವಳಿಗೆ 13 ಲಕ್ಷ ರೂ. ವಂಚನೆ

0
118

ಸುಳ್ಯ : ಉದ್ಯೋಗದ ಅಮಿಷವೊಡ್ಡಿ ಯುವತಿಯೋರ್ವಳಿಗೆ ಲಕ್ಷಾಂತರ ರೂ. ವಂಚಿಸಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿಯಾಗಿರುವ ಯುವತಿ ವಂಚನೆಗೊಳಗಾದ ಬಗ್ಗೆ ದೂರು ನೀಡಿದ್ದಾರೆ.

ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದು ತನ್ನನ್ನು ವಿಸ್ತಾರ ಏರ್ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದಾರೆ.ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದೆಯೆಂದು ತಿಳಿಸಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ.

ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದು ಉದ್ಯೋಗ ನೀಡದೇ ಮೋಸ ಮಾಡಿದ್ದಾರೆ ಎಂದು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

LEAVE A REPLY

Please enter your comment!
Please enter your name here