ಜಾಗತಿಕ ಕ್ರೀಡಾಹಬ್ಬ ಒಲಿಂಪಿಕ್ಸ್‌ಗೆ ಕ್ರಿಕೆಟ್‌ ಸೇರ್ಪಡೆ

By: Ommnews

Date:

Share post:

ಮುಂಬೈ : ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ (IOC) ನಿರ್ವಾಹಕರು ಒಲಿಂಪಿಕ್ಸ್‌ ಕ್ರೀಡೆಯಲ್ಲಿ ಕ್ರಿಕೆಟ್‌ ಸೇರ್ಪಡೆಗೊಳಿಸಿರುವುದಾಗಿ ಘೋಷಣೆ ಮಾಡಿದ್ದಾರೆ.

Advertisement
Advertisement
Advertisement

ಮುಂಬೈನಲ್ಲಿ ಒಲಿಂಪಿಕ್ಸ್‌ ಸಮಿತಿಯ ಕಾರ್ಯಕಾರಿ ಮಂಡಳಿ ಸಭೆ ನಡೆದ 2 ದಿನಗಳ ಬಳಿಕ ಮಾತನಾಡಿರುವ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಮಿತಿ ಅಧ್ಯಕ್ಷ, ಥಾಮಸ್ ಬಾಚ್, ಬೇಸ್‌ಬಾಲ್/ಸಾಫ್ಟ್‌ಬಾಲ್, ಫ್ಲ್ಯಾಗ್ ಫುಟ್‌ಬಾಲ್ ಜೊತೆಗೆ 5 ಹೊಸ ಕ್ರೀಡೆಗಳನ್ನು ಒಲಿಂಪಿಕ್ಸ್‌ಗೆ ಸೇರ್ಪಡೆಗೊಳಿಸಲಾಗಿದೆ. ಇದರಲ್ಲಿ ಕ್ರಿಕೆಟ್‌ ಸಹ ಒಂದು. ಕ್ರಿಕೆಟ್‌ ಸೇರ್ಪಡೆಗೊಳಿಸುವ ಪ್ರಸ್ತಾವನೆಯನ್ನು ಲಾಸ್‌ ಏಂಜಲಿಸ್‌ನ ಸಂಘಟಕ ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ ಎಂಬುದಾಗಿಯೂ ತಿಳಿಸಿದ್ದಾರೆ.

2028ರ ಲಾಸ್ ಏಂಜಲಿಸ್ ಒಲಿಂಪಿಕ್ಸ್ ನಲ್ಲಿ ಪುರುಷರು ಮತ್ತು ಮಹಿಳೆಯರ ಟಿ20 ಕ್ರಿಕೆಟ್ ವಿಭಾಗದಲ್ಲಿ ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ಹಲವು ತಂಡಗಳು ಭಾಗವಹಿಸಲಿವೆ.

2024ರ ಟಿ20 ವಿಶ್ವಕಪ್ ಟೂರ್ನಿಯು ಮುಂದಿನ ಜೂನ್ 4 ರಿಂದ ಜೂನ್ 30ರ ವರೆಗೆ ನಡೆಯಲಿದೆ. ಈಗಾಗಲೇ ಐಸಿಸಿ ಅಧಿಕಾರಿಗಳು ಅಮೆರಿಕದಲ್ಲಿ ಆತಿಥ್ಯ ವಹಿಸುವ ಸಂಭಾವ್ಯ ಸ್ಥಳಗಳ ಪರಿಶೀಲನೆ ನಡೆಸಿದ್ದಾರೆ. ಒಟ್ಟಾರೆ ಕೆರೆಬಿಯನ್ ಮತ್ತು ಯುಎಸ್‌ನ 10 ಸ್ಥಳಗಳಲ್ಲಿ ವಿಶ್ವಕಪ್ ಟೂರ್ನಿ ಜರುಗಲಿದ್ದು, ಯುನೈಟೆಡ್ ಸ್ಟೇಟ್ಸ್‌ನ ಲಾಡರ್ ಹಿಲ್, ಮೋರಿಸ್ವಿಲ್ಲೆ, ಡಲ್ಲಾಸ್, ನ್ಯೂಯಾರ್ಕ್ ಜೊತೆಗೆ ಫ್ಲೋರಿಡಾದಲ್ಲಿಯೂ ಪಂದ್ಯಗಳನ್ನ ಆಯೋಜಿಸಲಾಗುತ್ತಿದೆ.

Share post:

LEAVE A REPLY

Please enter your comment!
Please enter your name here