ದೇವೇಗೌಡ ಅವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದ ಬೆಂಗಳೂರು ವಿವಿ

By: Ommnews

Date:

Share post:

ಬೆಂಗಳೂರು : ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

Advertisement
Advertisement
Advertisement

ಇಂದು ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಿಲಾಗಿದೆ.

ನನಗೆ ಗೌರವ ಡಾಕ್ಟರೇಟ್ ನೀಡಿರುವುದು ಸಂತೋಷವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಅನ್ನು ತುಂಬಾ ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಬೆಂಗಳೂರು ವಿವಿ‌ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನ ಭಂಡಾರ. ಉನ್ನತ ಶಿಕ್ಷಣದಲ್ಲಿ ಉತೃಷ್ಕೃತೆಯನ್ನು ಸಾಧಿಸಿದೆ, ಈ ವಿವಿ ಬಗ್ಗೆ ನನಗೆ ಅಪಾರ ಗೌರವ ಇದೆ ಎಂದು ಬೆಂಗಳೂರು ವಿವಿಯನ್ನು ಹಾಡಿಹೊಗಳಿದರು.

ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು. ಶಿಕ್ಷಣ ಪುಸ್ತಕ ಜ್ಞಾನ, ಅಕ್ಷರ ಜ್ಞಾನ ಮಾತ್ರ ಅಲ್ಲ ವಿದ್ಯೆ ಹೃದಯವಂತಿಕೆ ಬೆಳೆಸಬೇಕು. ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ. ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಸಂದಿರುವುದು ಸಂತಸ ತಂದಿದೆ. ಇಸ್ರೋದ ಸಂಸ್ಥೆ ಇಂದು ಬಾಹ್ಯಕಾಶ ಕ್ಷೇತ್ರ ಭೂಪಟದಲ್ಲಿ ವಿಶ್ವಕ್ಕೆ ಪರಿಚಯ ಮಾಡಿ ಗೌರವ ತಂದಿದೆ. ವಿದ್ಯಾರ್ಥಿ ಜೀವನ ತಪ್ಪಸ್ಸು ಇದ್ದಂತೆ. ವಿದ್ಯೆ ಒಬ್ಬನ ಜೀವನ ಕಟ್ಟಿಕೊಳ್ಳವುದು ಮಾತ್ರವಲ್ಲ, ದೇಶವನ್ನು ಸಮಾಜವನ್ನು ಕಟ್ಟುತ್ತದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಅಗತ್ಯ ಹೆಚ್ಚಿದೆ. ತುಂಬಾ ಸಂತೋಷದಿಂದ ನಾನು ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದೇನೆ ಎಂದು ಸಂತಸ ವ್ಯಕ್ತಪಡಿಸಿದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section