ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. 496 ಜ್ಯೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಯ ವಿವರ:
ನಾಗರಿಕ ವಿಮಾನಯಾನ ಅಡಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ 496 ಜ್ಯೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಭರ್ತಿಗೆ ಮುಂದಾಗಿದೆ.
ವಿದ್ಯಾರ್ಹತೆ:
ಈ ಹುದ್ದೆಗೆ ಅಭ್ಯರ್ಥಿಗಳು ಎಂಜಿನಿಯರ್/ ವಿಜ್ಞಾನ ಕ್ಷೇತ್ರದಲ್ಲಿ ಪದವಿ ಪಡೆದುಕೊಂಡಿರಬೇಕು. ಭೌತಶಾಸ್ತ್ರ ಅಥವಾ ಗಣಿತವನ್ನು ಬಿಎಸ್ಸಿಯಲ್ಲಿ ಒಂದು ವಿಷಯವಾಗಿ ಓದಿರಬೇಕು. ಈ ಹುದ್ದೆಗೆ ಬಿಇ, ಬಿಟೆಕ್ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.
ವೇತನ:
ಈ ಹುದ್ದೆಗೆ ಅಭ್ಯರ್ಥಿಗಳಿಗೆ 40,000 -1,40,000 ರೂವರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
ವಯೋಮಿತಿ:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ, ಗರಿಷ್ಠ 27 ವರ್ಷ ವಯೋಮಿತಿ ಹೊಂದಿರಬೇಕು. ಹಿಂದುಳಿದ ಅಭ್ಯರ್ಥಿಗಳು 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲ ಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಸಲ್ಲಿಕೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಮುನ್ನ ಸರಿಯಾಗಿ ಅಧಿಸೂಚನೆಯನ್ನು ಓದಿ, ಅರ್ಥೈಸಿಕೊಂಡು ಮುಂದುವರೆಯಬೇಕಿದೆ. ಈ ಹುದ್ದೆಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲ ಚೇತನ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದ್ದು, ಇತರ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ, ಸಂದರ್ಶನ ಸೇರಿದಂತೆ ವಿವಿಧ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ನಡೆಸಲಾಗುವುದು.
ಈ ಹುದ್ದೆಗೆ ಅಭ್ಯರ್ಥಿಗಳು ನವೆಂಬರ್ 1 ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 30 ಆಗಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು aai.aero ಇಲ್ಲಿಗೆ ಭೇಟಿ ನೀಡಬಹುದಾಗಿದೆ.