ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದಲೇ ಉಚ್ಛಾಟನೆ ಮಾಡಲಾಗಿದೆ.
ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಉಚ್ಛಾಟನೆ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಜೆಡಿಎಸ್ ದೋಸ್ತಿ ಮಾಡಿದ್ದಕ್ಕೆ ಸಿಎಂ ಇಬ್ರಾಹಿಂ ಅಸಮಾಧಾನಗೊಂಡು ಪಕ್ಷ ವಿರೋಧಿ ಹೇಳಿಕೆ ನೀಡಿದ್ದರು.
ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡರು ಉಚ್ಛಾಟನೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಲೋಕಸಭಾ ಚುನಾವಣೆ ನಡೆಯುವವರೆಗೂ ಕುಮಾರಸ್ವಾಮಿ ಅವರನ್ನು ರಾಜ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಸಿಎಂ ಇಬ್ರಾಹಿಂ ಅವಧಿಯಲ್ಲಿ ನೇಮಕಗೊಂಡ ಎಲ್ಲಾ ಘಟಕಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.