ವಿಟ್ಲ : ವೀರಕಂಭ ಗ್ರಾಮದ ಕೊಟ್ಟಾರಿ ಕಟ್ಟೆ ಬಸ್ ನಿಲ್ದಾಣದ ಸಮೀಪ ರಸ್ತೆ ಬದಿಯಲ್ಲಿ ಅ.20ರಂದು ಮುಂಜಾನೆ ದನದ ಕಿವಿ ಮತ್ತು ಚರ್ಮ ಪತ್ತೆಯಾಗಿದೆ.
ಸ್ಥಳದಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ನೆರೆದಿದ್ದು, ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳೀಯರು ವಿಟ್ಲ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.