ರೈಲು ಅಪಘಾತದಲ್ಲಿ 20 ಮಂದಿ ಮೃತ್ಯು,100 ಮಂದಿಗೆ ಗಾಯ

0
104

ಢಾಕಾ: ಎರಡು ರೈಲುಗಳು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 20 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬಾಂಗ್ಲಾದೇಶದ ಭೈರಬ್‍ನಲ್ಲಿ ನಡೆದಿದೆ.

ಗೂಡ್ಸ್ ರೈಲು ಹಿಂದಿನಿಂದ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಎರಡು ರೈಲಿನ ಬೋಗಿಗಳು ಹಳಿ ತಪ್ಪಿವೆ. ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗೂ 20 ಶವಗಳನ್ನು ಹೊರ ತೆಗೆಯಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸುವ ಕೆಲಸ ನಡೆಯುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಘಟನೆಗೆ ಸಂಬಂಧ ತನಿಖೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here