ರಾಜ್ಯೋತ್ಸವ ಪ್ರಶಸ್ತಿಗೆ ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರೆಯಬೇಕು : ಸಿಎಂ

By: Ommnews

Date:

Share post:

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅರ್ಹರಿಗೆ ಪ್ರಶಸ್ತಿ ನೀಡಬೇಕು. ಕಡ್ಡಾಯವಾಗಿ ಸಾಮಾಜಿಕ ನ್ಯಾಯ ಪಾಲಿಸಬೇಕು, ಎಲ್ಲಾ ಜಾತಿ, ಧರ್ಮ, ಲಿಂಗಗಳಿಗೂ ಪ್ರಾತಿನಿಧ್ಯ ದೊರೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

Advertisement
Advertisement
Advertisement

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯ ಉನ್ನತ ಮಟ್ಟ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕ ಎಂದು ಮರುನಾಮಕರಣವಾಗಿ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡದ ಪರವಾಗಿ ಕಾರ್ಯನಿರ್ವಹಿಸಿರುವ ಸಂಘ ಸಂಸ್ಥೆಗಳಿಗೆ ಒಟ್ಟಾರೆ 10 ಪ್ರಶಸ್ತಿಗಳನ್ನ ನೀಡಬೇಕು ಎಂದು ಆಯ್ಕೆ ಸಮಿತಿ ಸದಸ್ಯರು ಅಭಿಪ್ರಾಯಪಟ್ಟರು.

ಈ ಬಾರಿ 68 ರಾಜ್ಯೋತ್ಸವ ಪ್ರಶಸ್ತಿಗಳನ್ನು ನೀಡಬೇಕಿದ್ದು, ಕರ್ನಾಟಕ ಸಂಭ್ರಮದ ಪ್ರಯುಕ್ತ ಸಂಘ ಸಂಸ್ಥೆಗಳಿಗೆ 10 ಪ್ರಶಸ್ತಿಗಳನ್ನು ನೀಡಲು ಸಭೆಯಲ್ಲಿ ತೀರ್ಮಾನ ಮಾಡಲಾಯಿತು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಸಚಿವರಾದ ಡಾ.ಜಿ ಪರಮೇಶ್ವರ್, ಡಾ.ಹೆಚ್.ಸಿ ಮಹದೇವಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಆಯ್ಕೆ ಸಮಿತಿ ಸದಸ್ಯರಾದ ಪ್ರೊ. ಜಾಣಗೆರೆ ವೆಂಕಟರಾಮಯ್ಯ, ಡಾ.ಎಚ್‌.ಎಲ್‌ ಪುಷ್ಪ, ಡಾ.ವೀರಣ್ಣ ದಂಡೆ, ಡಾ.ಮೂಡ್ನಾಕೂಡು ಚಿನ್ನಸ್ವಾಮಿ, ಅಲ್ಲಮಪ್ರಭು ಬೆಟ್ಟದೂರ, ಕಾ.ತ ಚಿಕ್ಕಣ್ಣ, ಪಿಂಡಿಪಾಪನಹಳ್ಳಿ ವೆಂಕಟಪ್ಪ, ಟಾಕಪ್ಪ ಕಣ್ಣೂರು, ಪಿಚ್ಚಳ್ಳಿ ಶ್ರೀನಿವಾಸ್‌, ಡಾ.ವಿಠಲ್‌ ಐ.ಬೆಣಗಿ-ಕೃಷಿ, ಡಾ. ಸಣ್ಣರಾಮು, ವೆಂಕಟರಾಮಯ್ಯ, ಡಾ.ಎಂ.ಎಸ್‌ ಮೂರ್ತಿ, ಡಾ.ಗೀತಾ ಶಿವಮೊಗ್ಗ, ಡಾ.ಜಯದೇವಿ ಜಂಗಮಶೆಟ್ಟಿ, ಐರೋಡಿ ಗೋವಿಂದಪ್ಪ, ಸಾಧುಕೋಕಿಲ, ಸುಕನ್ಯಾ ಪ್ರಭಾಕರ್‌, ಫ‌ಯಾಜ್‌ ಖಾನ್‌, ಹೃಷಿಕೇಶ್‌ ಬಹದ್ದೂರ್‌ ದೇಸಾಯಿ, ನರಸಿಂಹಲು ವಡವಾಟಿ, ಡಿ.ಎನ್‌ ನರಸಿಂಹರಾಜು, ಡಾ.ಪುರುಷೋತ್ತಮ ಬಿಳಿಮಲೆ, ಚನ್ನಬಸವಣ್ಣ, ಶೈಲೇಶ್‌ ಚಂದ್ರಗುಪ್ತ , ಜೆ.ಲೋಕೇಶ್‌ ಉಪಸ್ಥಿತರಿದ್ದರು.

Share post:

LEAVE A REPLY

Please enter your comment!
Please enter your name here

ದೇಣಿಗೆ

Add an Introductory Description to make your audience curious by simply setting an Excerpt on this section