ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಯುವತಿಯೊರ್ವಳು ನೇಣಿಗೆ ಶರಣು

0
96

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ ಎಂಬವರು ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹವಾಗಿದ್ದರು.ಮಗಳ ಮದುವೆಗಾಗಿ ತಂದೆ 18 ಪವನ್ ಚಿನ್ನವನ್ನು ಉಡುಗೊರೆಯಾಗಿ ನೀಡಿದ್ದರು.

ಗಂಡ ಅಜ್ಮಾನ್ ಮದುವೆಯಾದ ಕೆಲವೇ ದಿನಗಳಲ್ಲಿ ನೌಸೀನ್ ಳ ಒಡವೆಗಳನ್ನು ಮಾರಿದ್ದಾನೆ. ಜೊತೆಗೆ ಇನ್ನಷ್ಟು ಒಡೆವೆಗಳನ್ನು ತರುವಂತೆ ಪೀಡಿಸುತ್ತಿದ್ದ. ಇದು ಅಲ್ಲದೆ, ಅತ್ತೆ ಮತ್ತು ನಾದಿನಿಯವರು ಲವ್ ಮ್ಯಾರೇಜ್ ಆಗಿರುವ ಕಾರಣಕ್ಕಾಗಿ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದರು ಎನ್ನಲಾಗಿದೆ.

ಈ ವಿಚಾರವನ್ನು ಮನೆಯವರಲ್ಲಿ ತಿಳಿಸಿದ್ದಳು.ಗಂಡನ ಮನೆಯವರ ಕಿರುಕುಳ ತಾಳಲಾರದೆ ನೌಸೀನ್ ಅ.24 ರಂದು ತಾಯಿ ಮನೆಗೆ ಬಂದಿದ್ದಳು. ಮರುದಿನ ಮನೆಯವರು ಕೆಲಸಕ್ಕೆ ಹೋದ ಸಂದರ್ಭದಲ್ಲಿ ಇವಳು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ ಇವಳ ಸಾವಿಗೆ ಗಂಡ ಅತ್ತೆ, ಮತ್ತು ನಾದಿನಿಯವರೇ ಕಾರಣವಾಗಿದ್ದಾರೆ.

ಈ ಸಾವಿನ ಬಗ್ಗೆ ಸೂಕ್ತವಾದ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ನಾಸೀರ್ ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here