68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

0
124

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ರಾಜ್ಯದ 68 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ 68ನೇ ರಾಜ್ಯೋತ್ಸವ ಸಂದರ್ಭದಲ್ಲಿ ಪ್ರಶಸ್ತಿ ಘೋಷಿಸಲಾಗಿದೆ.

ಇಸ್ರೋ ಮುಖ್ಯಸ್ಥ ಸೋಮನಾಥ, ಚಲನಚಿತ್ರ ರಂಗದಲ್ಲಿ ಬ್ಯಾಂಕ್ ಜನಾರ್ಧನ ಮತ್ತು ಡಿಂಗ್ರಿ ನಾಗರಾಜ, ಯಕ್ಷಗಾನ ಕ್ಷೇತ್ರದಲ್ಲಿ ಆರ್ಗೋಡು ಮೋಹನದಾಸ್ ಶೆಣೈ, ಲೀಲಾವತಿ ಬೈಪಡಿತ್ತಾಯ, ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿ ಹಸನಬ್ಬ, ಬೆಂಗಳೂರಿನ ಖ್ಯಾತ ಗಾಲ್ಫರ್ ಅದಿತಿ ಅಶೋಕ್, ನ್ಯಾಯಮೂರ್ತಿ ಗೋಪಾಲಗೌಡ, ಹಾಜಿ ಅಬ್ವುಲ್ಲಾ, ಮಿಮಿಕ್ರಿ ದಯಾನಂದ್, ದಿನೇಶ್ ಅಮೀನ್ ಮಟ್ಟು, ಎಸ್ ಡಿಎಂ ನ್ಯಾಚುರೋಪತಿ ಕಾಲೇಜಿನ ಪ್ರಾಂಶುಪಾಲ ಡಾ ಪ್ರಶಾಂತ್ ಶೆಟ್ಟಿ ಸೇರಿದಂತೆ 68 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ.

13 ಮಹಿಳೆಯರು ಮತ್ತು 54 ಪುರುಷರು ಹಾಗೂ ಮತ್ತು ಒಬ್ಬರು ಮಂಗಳಮುಖಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿಯುರೂ 5 ಲಕ್ಷ ನಗದು ಹಾಗೂ 25 ಗ್ರಾಂ ಚಿನ್ನದ ಪದಕ ಒಳಗೊಂಡಿರುತ್ತದೆ.

LEAVE A REPLY

Please enter your comment!
Please enter your name here