ಕಠ್ಮಂಡು: ನೇಪಾಳದಲ್ಲಿ ನಡೆದ ಭಾರೀ ಭೂಕಂಪನದಿಂದ ಸಾವಿನ ಸಂಖ್ಯೆ 129ಕ್ಕೆ ಏರಿಕೆ ಆಗಿದೆ.
ನವೆಂಬರ್ 3 ರಂದು ರಾತ್ರಿ 11:47ರ ಸುಮಾರಿಗೆ ಸಂಭವಿಸಿದ ಭೂಕಂಪವು ಕಠ್ಮಂಡು, ಸುತ್ತಮುತ್ತಲಿನ ಜಿಲ್ಲೆಗಳು ಮತ್ತು ನವದೆಹಲಿಯವರೆಗೂ ವ್ಯಾಪಕವಾದ ಪರಿಣಾಮವನ್ನು ಬೀರಿತು. ವರದಿಗಳ ಪ್ರಕಾರ, ಪಶ್ಚಿಮ ನೇಪಾಳದ ಜಾಜರ್ ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ ಸರಿಸುಮಾರು 128 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 140ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸದ್ಯ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು ನೇಪಾಳ ಸೇನೆ ಮತ್ತು ನೇಪಾಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಭರದಿಂದ ಸಾಗಿದೆ. ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ ಇಂದು ಬೆಳಗ್ಗೆ ವೈದ್ಯಕೀಯ ತಂಡದೊಂದಿಗೆ ಭೂಕಂಪದ ಘಟನೆಯ ಸ್ಥಳಕ್ಕೆ ತೆರಳಿದ್ದಾರೆ.