ಹಾಡಹಗಲೇ ಪುತ್ತೂರಿನಲ್ಲಿ ತಲ್ವಾರ್ ಸದ್ದು

0
105

ಪುತ್ತೂರು: ಶುಕ್ರವಾರ ಹಾಡಹಗಲೇ ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆದ ಘಟನೆ ನಡೆದಿದೆ.

ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಗೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದ.ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು.ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ.ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಟ್ಸಾಪ್ ಗ್ರೂಪ್‌ನಲ್ಲಿ ನಡೆದ ಚರ್ಚೆಯ ಕೋಪದಲ್ಲಿ ಈ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here