ಆಸ್ಟ್ರೇಲಿಯಾದ ನಟ, ಗಾಯಕ ಜಾನಿ ರೆಪೋ ಕ್ಯಾನ್ಸರ್ನಿಂದಾಗಿ ನಿಧನರಾಗಿದ್ದಾರೆ.
ಜಾನಿ ರೆಪೋ 1017ರಿಂದಲೂ ಮೆದುಳು ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ತಾವು ಕ್ಯಾನ್ಸರ್ ಗೆ ತುತ್ತಾಗಿದ್ದೇನೆ ಎಂದು ತಿಳಿಯುತ್ತಿದ್ದಂತೆಯೇ ಕ್ಯಾನ್ಸರ್ ವಿರುದ್ಧ ಹೋರಾಟದ ಅಭಿಯಾನದಲ್ಲೂ ಸಕ್ರಿಯರಾಗಿದ್ದರು.
ಶುಕ್ರವಾರವಷ್ಟೇ 35ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.