ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ

0
89

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಹೈಕಮಾಂಡ್‌ ನೇಮಕಗೊಳಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ವಿಜಯೇಂದ್ರ ಅವರನ್ನು ನೇಮಕಗೊಳಿಸಿದ ಆದೇಶ ಪ್ರಕಟಿಸಿದ್ದಾರೆ.

ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಸಿಟಿ ರವಿ ಹೆಸರು ಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್‌ ಲೋಕಸಭಾ ಚುನಾವಣೆ ದೃಷ್ಟಿಯಿಂದ ಮೊದಲ ಬಾರಿಗೆ ಶಾಸಕನಾಗಿ ಆಯ್ಕೆ ಆಗಿರುವ ಬಿವೈ ವಿಜಯೇಂದ್ರ ಅವರಿಗೆ ಅಧ್ಯಕ್ಷ ಸ್ಥಾನ ನೀಡಿದೆ.

ವಿಜಯೇಂದ್ರ ಯುವ ನಾಯಕರಾಗಿರುವ ಕಾರಣ ಕಾರ್ಯಕರ್ತರ ಪಡೆ ಇನ್ನಷ್ಟು ಬಲವಾಗುವ ಜತೆಗೆ ಪಕ್ಷ ಸಂಘಟನಾ ಸಾಮರ್ಥ್ಯವು ಹೆಚ್ಚಾಗುವ ನಿರೀಕ್ಷೆಯನ್ನು ಬಿಜೆಪಿ ಇಟ್ಟುಕೊಂಡಿದೆ. ಇದರ ಜೊತೆ ಪ್ರಬಲ ಸಮುದಾಯವಾದ ಲಿಂಗಾಯತ ಮತಬ್ಯಾಂಕ್ ರಕ್ಷಣೆ, ಸಮುದಾಯದ ನಾಯಕರ ವಲಸೆ ತಡೆಗೂ ಬ್ರೇಕ್ ಬೀಳುವ ಸಾಧ್ಯತೆಯಿದೆ.

ಲಿಂಗಾಯತ ಮತಗಳು ಕೈ ಜಾರುವ ಭೀತಿಯಲ್ಲಿರುವಾಗ ಬಿಜೆಪಿ ಈಗ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನವನ್ನು ನೀಡಿದೆ.

LEAVE A REPLY

Please enter your comment!
Please enter your name here