ತೆಲುಗು ಸಿನಿಮಾ ರಂಗದ ಖ್ಯಾತ ನಟ ಚಂದ್ರ ಮೋಹನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
82ರ ವಯಸ್ಸಿನ ಚಂದ್ರಮೋಹನ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗಿ ವಿಧಿವಶರಾಗಿದ್ದಾರೆ.
ನೂರಾರು ಸಿನಿಮಾಗಳಲ್ಲಿ ನಾಯಕರಾಗಿ, ಅನೇಕ ಚಿತ್ರಗಳಲ್ಲಿ ಸಹ ನಟರಾಗಿ ಕೆಲಸ ಮಾಡಿದ್ದಾರೆ. ಹಾಸ್ಯ ಪಾತ್ರಗಳ ಮೂಲಕ ಹೆಚ್ಚಾಗಿ ಅಭಿಮಾನಿಗಳನ್ನು ರಂಜಿಸಿದ್ದರು ಚಂದ್ರಮೋಹನ್.
ಹಿರಿಯ ನಟನ ನಿಧನಕ್ಕೆ ಅನೇಕ ಸಿನಿಮಾ ನಟರು, ನಟಿಯರು ಹಾಗೂ ತಂತ್ರಜ್ಞರು ಸಂತಾಪ ಸೂಚಿಸಿದ್ದಾರೆ. ರಾಜಕೀಯ ಗಣ್ಯರು ಕೂಡ ಕಂಬನಿ ಮಿಡಿದಿದ್ದಾರೆ.