ಶ್ರೀನಗರ : ಪ್ರಸಿದ್ಧ ಪ್ರವಾಸಿ ಕೇಂದ್ರವಾದ ದಾಲ್ ಸರೋವರದಲ್ಲಿ ಶನಿವಾರ ಮುಂಜಾನೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಂತರ ಮೌಲ್ಯದ ಆಸ್ತಿ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿ ಅವಘಡದಿಂದ ದಾಲ್ ಸರೋವರದ ಬಳಿ ಇರುವ ಸುಮಾರು ಐದು ಹೌಸ್‌ಬೋಟ್‌ಗಳು ಬೆಂಕಿಗೆ ಆಹುತಿಯಾಗಿದೆ ಜೊತೆಗೆ ಮೂರು ಗುಡಿಸಲುಗಳು ಸುಟ್ಟು ಹೋಗಿದ್ದು ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಅವರು ತಿಳಿಸಿದ್ದಾರೆ.
ಶ್ರೀನಗರದ ಪ್ರವಾಸಿ ತಾಣದಲ್ಲೇ ಅತೀ ಹೆಚ್ಚು ಜನಪ್ರಿಯತೆಯನ್ನು ಪಡೆದಿರುವ ಸ್ಥಳವಾಗಿರುವ ದಾಲ್ ಸರೋವರ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಅಲ್ಲದೆ ಇಲ್ಲಿನ ಹೌಸ್‌ಬೋಟ್ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರಬಹುದು ಎಂದು ಹೇಳಲಾಗಿದೆ.