ಮಂಗಳೂರು: ಜೀವನದಲ್ಲಿ ಜಿಗುಪ್ಸೆಗೊಂಡು ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್ ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ಸೋಮವಾರ ಮುಂಜಾನೆ ನಡೆದಿದೆ.
ಎಜೆ ಸಂಸ್ಥೆಯ ಎಂಬಿಬಿಎಸ್ ವಿದ್ಯಾರ್ಥಿನಿ ಪ್ರಕೃತಿ ಶೆಟ್ಟಿ (20 ವರ್ಷ) ಮೃತಪಟ್ಟವರು.
ಸೋಮವಾರ ಮುಂಜಾನೆ 3 ಗಂಟೆಗೆ ಮಹಿಳಾ ಹಾಸ್ಟೆಲ್ ನಲ್ಲಿ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಜೀವನದಲ್ಲಿ ಹತಾಶೆಗೊಂಡು ಈ ಕೃತ್ಯ ನಡೆಸಿರುವುದಾಗಿ ಬರೆಯಲಾಗಿದೆ.