ಉಡುಪಿ : ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದ್ದು ಆರೋಪಿ ಅರುಣ್ ಚೌಗುಲೆ ಯನ್ನು ಕೋರ್ಟ್ ಗೆ ಹಾಜರು ಪಡಿಸಲಾಗಿದೆ.
ಈ ಪ್ರಕರಣದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ ಪಿ ಡಾ ಅರುಣ್ ಕೆ, ಪ್ರವೀಣ್ ಚೌಗುಲೆ ಕೊಲೆಯನ್ನು ಒಪ್ಪಿಕೊಂಡಿದ್ದಾರೆ.ಕೊಲೆಗೆ ಕಾರಣ ವಿಚಾರಣೆಯಲ್ಲಿ ಪಡೆದುಕೊಳ್ಳುತ್ತೇವೆ. ಕೊಲೆಗೆ ಮೂರ್ನಾಲ್ಕು ಕಾರಣಗಳು ಇರುವ ಸಾಧ್ಯತೆ ಇದೆ. ಸಂಪೂರ್ಣ ತನಿಖೆ ಮಾಡದೆ ಕಾರಣ ಹೇಳಲು ಸಾಧ್ಯವಿಲ್ಲ.
ಅವನ ಉದ್ದೇಶ ಅಯ್ನಾಝ್ ಕೊಲೆ ಮಾಡುವುದಾಗಿತ್ತು. ತಪ್ಪಿಸಿಕೊಳ್ಳಲು ಎಲ್ಲರನ್ನೂ ಕೊಲೆ ಮಾಡಿದ್ದಾನೆ. ಕೊಲೆ ಸಾಕ್ಷಿ ನಾಶ ಮಾಡಲು ಮೂವರ ಕೊಲೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಪ್ರವೀಣ್ ಚೌಗುಲೆಗೆ ಮದುವೆಯಾಗಿತ್ತು ತಾಂತ್ರಿಕ ಸಾಕ್ಷಿಗಳ ಸಂಗ್ರಹ ಮಾಡಿ ಬಂಧಿಸಿದ್ದೇವೆ ಎಂದರು.
ಹಸೀನಾ ಅವರ ಎರಡನೇ ಮಗಳು ಮಂಗಳೂರು ಏರ್ ಪೋರ್ಟ್ ನಲ್ಲಿ ಏರ್ ಹೋಸ್ಟರ್ ವೃತ್ತಿ ಮಾಡುತ್ತಿದ್ದು, ಅದೇ ವಿಮಾನ ನಿಲ್ದಾಣದಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆ ಕೆಲಸ ಮಾಡುತ್ತಿದ್ದಾಗ ಆಕೆಯ ಪರಿಚಯವಾಗಿ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಪ್ರೇಮ ವೈಫಲ್ಯದಿಂದಾಗಿ ಈ ಕೃತ್ಯವೆಸಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಆರೋಪಿ ಪ್ರವೀಣ್ ನನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ.