ನೆಲ್ಯಾಡಿ : ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಹೋಗುತ್ತಿದ್ದ ವೇಳೆ ಕೋಲ್ಪೆಯಲ್ಲಿ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡಿರುವ ಘಟನೆ ಗುರುವಾರ ಸಂಭವಿಸಿದೆ.
ಬಂಟ್ವಾಳ ತಾಲೂಕಿನ ಕರೋಪಾಡಿ ನಿವಾಸಿ ದೀಕ್ಷಿತ್ ಗಾಯಗೊಂಡವರು.
ಲಾರಿ ನೆಲ್ಯಾಡಿಯಿಂದ ಉಪ್ಪಿನಂಗಡಿ ಕಡೆಗೆ ಹೊರಟಿದ್ದು ಚಾಲಕ ಕೋಲ್ಪೆಯಲ್ಲಿ ಲಾರಿ ನಿಲ್ಲಿಸಿ ಊಟಕ್ಕೆ ತೆರಳಿದ್ದರು. ಬೈಕ್ ಚಲಾಯಿಸಿಕೊಂಡು ಬಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದೀಕ್ಷಿತ್ ಗಾಯಗೊಂಡಿದ್ದಾರೆ.
ಗಾಯಾಳು ದೀಕ್ಷಿತ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.