ಪುತ್ತಿಲ ಪರಿವಾರದ ವತಿಯಿಂದ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ

0
95

ಪುತ್ತೂರು: ಮುಕ್ರಂಪಾಡಿಯ ಸುಭದ್ರ ಕಲ್ಯಾಣಮಂಟಪದಲ್ಲಿ ಪುತ್ತಿಲ ಪರಿವಾರದ ವತಿಯಿಂದ ಡಿ.24 ಮತ್ತು 25 ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಲೋಕಕಲ್ಯಾಣರ್ಥವಾಗಿ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಬೃಹತ್ ಸಂತ ಸಮ್ಮೇಳನ ನಡೆಯುವ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ಡಿ.24 ರ ಸಂಜೆ ತಿರುಪತಿಯಿಂದ ಆಗಮಿಸುವ ದೇವರನ್ನು ಬೊಳುವಾರಿನಿಂದ ವೈಭವದ ಮೆರವಣಿಗೆಯಲ್ಲಿ ತರಲಾಗುವುದು. ರಾತ್ರಿ ಪೂಜೆಯ ನಂತರ ಸಾಂಸ್ಕೃತಿಕ ಕಾರ್ಯಕ್ರಮ, ಮರುದಿನ ಬೆಳಿಗ್ಗೆ ವಿಶೇಷ ಉದಯಾಸ್ತಮಾನ ಪೂಜೆ , ನಂತರ ರಾಮಕೃಷ್ಣ ಕಾಟುಕುಕ್ಕೆ ಅವರಿಂದ ಭಜನೋತ್ಸವ, ಸಂಜೆ ಬೃಹತ್ ಸಂತ ಸಮ್ಮೇಳನ ನಡೆಯಲಿದೆ ಎಂದರು.

ಸಭೆಯ ನಂತರ ಶ್ರೀನಿವಾಸ ಕಲ್ಯಾಣೋತ್ಸವ ಜರುಗಲಿದೆ. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಪೂರ್ವಭಾವಿ ಸಭೆಯಲ್ಲಿ ಸಮಿತಿ ರಚನೆ ನಡೆಯಿತು. ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ, ಶ್ರೀನಿವಾಸ ಕಲ್ಯಾಣೋತ್ಸವದ ಅಧ್ಯಕ್ಷರಾದ ಶಶಾಂಕ್ ಕೊಟೇಚಾ, ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್, ಮಹಿಳಾ ಘಟಕದ ಅಧ್ಯಕ್ಷೆ ಮಲ್ಲಿಕಾ ಪ್ರಸಾದ್, ಗಣೇಶ್ ಭಟ್ ಮಕರಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪುತ್ತಿಲ ಪರಿವಾರದ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿ ಮಠ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here