ಬೆಳ್ಳಾರೆ : ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲಗದ್ದೆ ನಿವಾಸಿಗಳಾದ ಮಂಜುನಾಥ್ ಆಚಾರ್ ಹಾಗೂ ಧರ್ಮಾವತಿ ಅವರನ್ನು ಮದ್ಯದ ನಶೆಯಲ್ಲಿ ಮಗ ದೇವಿ ಪ್ರಸಾದ್ ಕತ್ತಿಯಿಂದ ದಾಳಿ ನಡೆಸಿದ ಘಟನೆ ಸೋಮವಾರ ಸಂಜೆ ನಡೆದಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಗಂಭೀರವಾಗಿ ಗಾಯಗೊಂಡಿರುವ ಮಂಜುನಾಥ್ ಆಚಾರ್ ಹಾಗೂ ಧರ್ಮಾವತಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.