ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗೌರವ

0
77

ಮಂಗಳೂರು : ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರನ್ನು ಏರ್ ಇಂಡಿಯಾ ಸಿಬ್ಬಂದಿ ಗೌರವಿಸಿದರು.

ಹಿದಾಯ ಫೌಂಡೇಶನ್ ಜುಬೈಲ್ ಘಟಕದ ವತಿಯಂದ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮಂಗಳೂರಿನಿಂದ ದಮ್ಮಾಮ್ ಗೆ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಹೊರಟಿದ್ದರು.

ಹಾಜಬ್ಬ ಏರ್ ಇಂಡಿಯ ಎಕ್ಸ್ ಪ್ರೆಸ್ ವಿಮಾನದಲ್ಲಿ ಪ್ರಯಾಣಿಸುತ್ತಿರುವುದನ್ನು ಗುರುತಿಸಿದ ಏರ್ ಇಂಡಿಯ ಎಕ್ಸ್ ಪ್ರೆಸ್ ನ ಸಿಬ್ಬಂದಿ ವಿಮಾನದ ಕ್ಯಾಪ್ಟನ್ ನ ಗಮನಕ್ಕೆ ತಂದರು. ಕ್ಯಾಪ್ಟನ್ ವಿಮಾನದಲ್ಲಿರುವ ಪ್ರಯಾಣಿಕರಿಗೆ ಹಾಜಬ್ಬರನ್ನು ಪರಿಚಯಿಸುತ್ತಾ, “ಶಿಕ್ಷಣ ರಂಗದಲ್ಲಿ ಅಪೂರ್ವ ಸೇವೆ ಸಲ್ಲಿಸಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ನಮ್ಮ ವಿಮಾನದಲ್ಲಿ ಪ್ರಯಾಣಿಸುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಅವರಿಗೆ ಹೃದಯ ತುಂಬಿದ ಅಭಿನಂದನೆಗಳು” ಎಂದರು.

LEAVE A REPLY

Please enter your comment!
Please enter your name here