ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹೆಚ್‌ಎಎಲ್ ಸಂಸ್ಥೆಯ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದಾರೆ.
ಮೋದಿ ಆಗಮನದ ವೇಳೆ ಎಚ್‌ಎಎಲ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ವೈಟ್‌ಫೀಲ್ಡ್ ಡಿಸಿಪಿ ನೇತೃತ್ವದಲ್ಲಿ ಪೊಲೀಸರ ಬಂದೋಬಸ್ತ್ ಮಾಡಲಾಗಿದೆ. 4 ಎಸಿಪಿ, 8 ಇನ್ಸ್ಪೆಕ್ಟರ್ ಸೇರಿ 500 ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿದೆ.
ಮಧ್ಯಾಹ್ನ 12 ಗಂಟೆಯವರೆಗೆ ಹೆಚ್‌ಎಎಲ್ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಲಿದ್ದು, ತೇಜಸ್ ಯುದ್ಧ ವಿಮಾನ ಉತ್ಪಾದನೆಯನ್ನು ಪರಿಶೀಲಿಸಲಿದ್ದಾರೆ.
12:15ಕ್ಕೆ ಭಾರತೀಯ ವಾಯುಸೇನೆ ವಿಮಾನದ ಮೂಲಕ ತೆಲಂಗಾಣಕ್ಕೆ ಪ್ರಯಾಣ ಬೆಳೆಸಲಿದ್ದು, ಅಲ್ಲಿನ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳಲಿದ್ದಾರೆ.