ಮಹಿಳೆಗೆ ಚಾಕು ತೋರಿಸಿ ಚಿನ್ನ ಕೊಡುವಂತೆ ಬೆದರಿಕೆ

0
109

ವಿಟ್ಲ: ಕುಳ ಗ್ರಾಮದ ನೀರಪಳಿಕೆಯಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಕೊಡುವಂತೆ ಬೆದರಿಸಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ನೀರಪಳಿಕೆ ಮಹಮ್ಮದ್ ಕುಂಞ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.

ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾಗ ಮನೆಯಲ್ಲಿ ವೃದ್ಧ ಮಹಿಳೆ ಮಾತ್ರ ಇರುವ ಸಂದರ್ಭ ಮನೆಯ ಮುಖ್ಯ ದ್ವಾರದ ಮೂಲಕ ವ್ಯಕ್ತಿಯೋರ್ವ ಮುಖಕ್ಕೆ ಮಾಸ್ಕ್ ಹಾಕಿ ಒಳ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿ ಮಹಿಳೆಗೆ ಚಾಕು ತೋರಿಸಿ, ಕಿವಿಯಲ್ಲಿರುವ ಚಿನ್ನ ಕೊಡುವಂತೆ ಕೇಳಿದ್ದಾನೆ.

ಹೆದರಿದ ಮಹಿಳೆ ಹಿಂದಿನ ಬಾಗಿಲು ಮೂಲಕ ಹತ್ತಿರದ ಮನೆಯವರನ್ನು ಕೂಗಿ ಕರೆದಾಗ ಆತ ಹಿಂಬದಿಯ ತೋಟದ ದಾರಿಯಾಗಿ ಪರಾರಿಯಾದ್ದಾನೆ.

ಬಳಿಕ 112ಕ್ಕೆ ಕರೆಮಾಡಿ ಮಾಹಿತಿ ನೀಡಿದಾಗ ತುರ್ತು ಕಾರ್ಯಪಡೆಯ ಪೊಲೀಸ್‌ ತಂಡ ಸ್ಥಳಕ್ಕೆ ಆಗಮಿಸಿದರು. ಬಳಿಕ ವಿಟ್ಲ ಠಾಣೆಗೆ ಮಾಹಿತಿ ನೀಡಲಾಯಿತು. ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.

LEAVE A REPLY

Please enter your comment!
Please enter your name here