ರಾಯ್ಪುರ್ :ಇಲ್ಲಿನ ಶಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ರೋಚಕ ಟಿ20 ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯ ತಂಡಕ್ಕೆ ಸೋಲುಣಿಸಿ ಸರಣಿ ಜಯ ಸಾಧಿಸಿದೆ. ಸರಣಿಯನ್ನು 3-1 ಅಂತರದಿಂದ ಜಯಿಸಿದೆ. ಇನ್ನೊಂದು ಪಂದ್ಯ ಬಾಕಿ ಉಳಿದಿದೆ.
ಭಾರತ ನೀಡಿದ 175 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಲಷ್ಟೇ ಶಕ್ತವಾಯಿತು.
ಆಸ್ಟ್ರೇಲಿಯ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಭಾರತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತು.ಆಸೀಸ್ ಗೆ ಕೊನೆಯ 12 ಎಸೆತಗಳಲ್ಲಿ 40 ರನ್ ಅಗತ್ಯವಿತ್ತು.
ವಿಶ್ವಕಪ್ ಪಂದ್ಯದ ಸೋಲಿನ ಬಳಿಕ ಸೂರ್ಯಕುಮಾರ್ ಯಾದವ್ ಅವರ ನಾಯಕತ್ವಕ್ಕೆ ಸವಾಲೆನಿಸಿದ್ದ ಆಸೀಸ್ ಸರಣಿಯಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿ ಸಂಭ್ರಮಿಸಿದೆ.