ಅರ್ಜುನ ಆನೆಯ ಅಂತಿಮ ದರ್ಶನ ಸಂದರ್ಭದಲ್ಲಿ ಬಾವೋದ್ವೇಗಕ್ಕೆ ಒಳಗಾದ ಮಾವುತ ವಿನು

0
97

ಹಾಸನ : ಅರ್ಜುನನ ಅಂತಿಮ ದರ್ಶನ ಪಡೆದು ಮಾವುತ ವಿನು ಕಣ್ಣೀರಿಟ್ಟರು. ಅರ್ಜುನನ ಸೊಂಡಿಲನ್ನು ತಬ್ಬಿಕೊಂಡು ನನ್ನ ಆನೆಯನ್ನು ಬದುಕಿಸಿಕೊಡಿ. ನನ್ನ ಆನೆಯನ್ನು ಮೈಸೂರಿಗೆ ಕಳುಹಿಸಿಕೊಡಿ. ಇಲ್ಲವೇ ನನ್ನನ್ನು ಹಾಗೂ ನನ್ನ ಕುಟುಂಬವನ್ನು ಅರ್ಜುನನ ಜೊತೆ ಮಣ್ಣು ಮಾಡಿ. ಅರ್ಜುನ ಸತ್ತಿಲ್ಲ ಎಂದು ನನ್ನ ಹೆಂಡತಿ ಮಕ್ಕಳಿಗೆ ಹೇಳಿದ್ದೇನೆ. ಅರ್ಜುನನನ್ನು ನನ್ನ ಜೊತೆ ಕಳುಹಿಸಿಕೊಡಿ ಎಂದು ಮಾವುತ ಅರ್ಜುನನ ಎದುರು ರೋಧಿಸಿದ್ದಾರೆ.

ವಿನು ಅವರು ಅರ್ಜುನನ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದರು. ಇದೀಗ ಅರ್ಜುನನ ಸಾವಿನ ನೋವನ್ನು ಅರಗಿಸಿಕೊಳ್ಳಲಾಗದೆ ರೋಧಿಸುತ್ತಿದ್ದಾರೆ. ಮಂಗಳವಾರ ಅರ್ಜುನನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದಿದ್ದರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರು. ಇಂದು ಚೇತರಿಸಿಕೊಂಡು ಬಂದಿದ್ದ ವಿನು ಅವರು ತನ್ನ ಪ್ರೀತಿಯ ಅರ್ಜುನನ್ನು ಕಂಡು ಬಿಕ್ಕಳಿಸಿ ಬಿಕ್ಕಳಿಸಿ ಅತ್ತಿದ್ದಾರೆ. ಇದು ನೋಡಗರ ಕಣ್ಣಲ್ಲಿ ನೀರು ತರಿಸುವಂತಿತ್ತು.

LEAVE A REPLY

Please enter your comment!
Please enter your name here