ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿಯಲ್ಲಿ ಅಪರಿಚಿತ ಬಂದೂಕುದಾರಿಗಳಿಂದ ನಡೆದ ಗುಂಡಿನ ದಾಳಿಗೆ 2015ರ ಉಧಂಪುರ ದಾಳಿಯ ಮಾಸ್ಟರ್ ಮೈಂಡ್ ಲಷ್ಕರ್-ಎ-ತೊಯ್ಬಾ ಭಯೋತ್ಪಾದಕ ಹಂಜ್ಲಾ ಅದ್ನಾನ್ ದುರ್ಮರಣಕ್ಕೀಡಾಗಿದ್ದಾನೆ.
ಇತ್ತೀಚೆಗೆ ಹಂಝ್ಲಾ ಅದ್ನಾನ್ ತನ್ನ ಕಾರ್ಯಾಚರಣೆಯ ನೆಲೆಯನ್ನು ರಾವಲ್ಪಿಂಡಿಯಿಂದ ಕರಾಚಿಗೆ ಬದಲಾಯಿಸಿದ್ದ. ಕಳೆದ ಎರಡು ದಿನಗಳ ಹಿಂದೆ ತಡರಾತ್ರಿಯಲ್ಲಿ ಅಪರಿಚಿತ ಬಂದೂಕುಧಾರಿಗಳಿಂದ ನಡೆದ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.
ಅಪರಿಚಿತರು ಗುಂಡಿನ ದಾಳಿ ನಡೆಸಿದಾಗ ಹಂಜ್ಲಾ ಅದ್ನಾನ್‌ಗೆ ನಾಲ್ಕು ಬುಲೆಟ್ ತಗುಲಿತ್ತು, ಇದರಿಂದ ತೀವ್ರ ರಕ್ತಸ್ರಾವವಾಗಿತ್ತು. ಈ ಸುಳಿವನ್ನು ಬಿಟ್ಟುಕೊಡದ ಪಾಕಿಸ್ತಾನ ಸೇನೆ ರಹಸ್ಯವಾಗಿ ಕರಾಚಿಯ ಆಸ್ಪತ್ರೆಗೆ ಕರೆದೊಯ್ದಿತ್ತು. ಎರಡು ದಿನಗಳ ನಂತ್ರ ಚಿಕಿತ್ಸೆ ಫಲಕಾರಿಯಾಗದೇ ಡಿಸೆಂಬರ್ 5ರಂದು ಸಾವನ್ನಪ್ಪಿದ್ದಾನೆ ಎಂದು ಮೂಲಗಳು ತಿಳಿಸಿವೆ.